ಹೊಸಪೇಟೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿಷ್ಯವೇತನ ಪಡೆಯಲು ಇಚ್ಛಿಸುವ ಕಾನೂನು ಪದವೀಧರರು ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 31 ರೊಳಗೆ ಹೊಸಪೇಟೆಯ ಅಂಬೇಡ್ಕರ್ ಸರ್ಕಲ್ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷದೊಳಗಿರಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.