ಹೊಸಪೇಟೆ : ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಜ.27ರಂದು ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಗ್ಗೆ 9.30ರಿಂದ 11.30ವರೆಗೆ ಸಚಿವರು ಹಾಗೂ ಶಾಸಕರು, ಚುನಾಯಿತ ಪ್ರತಿನಿಧಿಗಳು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಸಾರ್ವಜನಿಕರು ತಮ್ಮ ಕುಂದುಕೊರತೆಯ ಅಹವಾಲುಗಳನ್ನು ಸಚಿವರು ನಡೆಸುವ ಜನತಾ ದರ್ಶನದಲ್ಲಿ ನೀಡುವ ಮೂಲಕ ಪರಿಹರಿಸಿಕೊಳ್ಳಲು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.