More

    ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಜೂ.3ರಂದು ಚುನಾವಣೆ

    ಹೊಸಪೇಟೆ: ರಾಜ್ಯ ವಿಧಾನ ಪರಿಷತ್ತಿನ 03 ಪದವೀಧರರ ಕ್ಷೇತ್ರಕ್ಕೆ ದ್ವೆöÊವಾರ್ಷಿಕ ಚುನಾವಣೆ ಘೋಷಣೆಯಾಗಿದ್ದು, ಮೇ.9ರಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಅಧಿಸೂಚನೆ ಹೊರಡಿಸಲಿದ್ದು, ನೀತಿ ಸಂಹಿತೆಯ ಎಲ್ಲಾ ನಿಬಂಧನೆಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

    ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

    ಕೇಂದ್ರ ಚುನಾವಣಾ ಆಯೋಗ ರಾಜ್ಯದ ವಿಧಾನ ಪರಿಷತ್‌ಗೆ ಅವಧಿ ಮುಕ್ತಾಯವಾಗುವ ಮೂರು ಶಿಕ್ಷಕರ ಕ್ಷೇತ್ರಗಳ ಜತೆಗೆ ಮೂರು ಪದವೀಧರರ ಕ್ಷೇತ್ರಗಳಿಗೆ ದೈವಾರ್ಷಿಕ ಚುನಾವಣೆಯನ್ನು ಘೋಷಣೆ ಮಾಡಿದೆ. ಮೇ 9ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರಗಳ ಸಲ್ಲಿಕೆಗೆ ಮೇ.16 ಕೊನೆಯ ದಿನವಾಗಿದೆ. ಮೇ.17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಮೇ.20 ಕೊನೆಯ ದಿನವಾಗಿದೆ. ಜೂ.3ರಂದು ಬೆಳಗ್ಗೆ 8 ಗಂಟೆಯಿAದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಜೂ.06ರಂದು ಮತ ಎಣಿಕೆ ನಡೆಯಲಿದೆ. ಈ ಚುನಾವಣೆಯ ಪ್ರಕ್ರಿಯೆಯು ಜೂ.12ರೊಳಗೆ ಮುಕ್ತಯವಾಗಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈಗಾಗಲೇ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದ್ದು, ಎಲ್ಲಾ ನಿಬಂಧನೆಗಳು ವಿಧಾನ ಪರಿಷತ್ತಿನ ಚುನಾವಣೆಗಳಿಗೆ ಅನ್ವಯಿಸುತ್ತವೆ ಎಂದರು.

    ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಕಾಲಕಾಲಕ್ಕೆ ಹೊರಡಿಸುವ ಎಲ್ಲಾ ನಿರ್ದೇಶನಗಳನ್ನು ಪಾಲನೆ ಮಾಡಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದAತೆ ನೋಡಿಕೊಳ್ಳಬೇಕು ಎಂದರು.

    ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಚುನಾವಣಾ ಶಾಖೆಯ ಮನೋಜ ಲಾಡೆ, ವಿವಿಧ ಪಕ್ಷಗಳ ಪ್ರತಿನಿಧಿಗಳಾದ ಮಧುಸೂದನ್, ನಿಂಬಗಲ್ ರಾಮಕೃಷ್ಣ, ಪಿ.ವೀರಾಂಜನೇಯ, ಮಂಜುನಾಥ, ಕೆ.ಕೊಟ್ರೇಶ್ ಇತರರಿದ್ದರು.

    ಮೇ.6 ಕೊನೆಯ ದಿನ:

    ರಾಜ್ಯ ವಿಧಾನ ಪರಿಷತ್ತಿನ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಲು ಇಚ್ಚಿಸುವ ಅರ್ಹರು ತಮ್ಮ ಹೆಸರನ್ನು ಸದರಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಮೇ.6 ಕೊನೆಯ ದಿನವಾಗಿದೆ. ಆಯಾ ತಾಲೂಕು ಕಚೇರಿಗಳಲ್ಲಿ ನೇರವಾಗಿ ಅರ್ಜಿ ಸಲ್ಲಿಸ ಬಹುದು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts