More

    ಬಾಕಿ ವೇತನ ಪಾವತಿಗೆ ಪಟ್ಟು: ಹೊಸಪೇಟೆಯಲ್ಲಿ ಸರ್ಕಾರಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

    ಹೊಸಪೇಟೆ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಸರ್ಕಾರಿ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ಎಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಗ್ರೇಡ್-2 ತಹಸೀಲ್ದಾರ್ ಪ್ರತಿಭಾಗೆ ಮನವಿ ಸಲ್ಲಿಸಿತು.

    ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ.ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ 2020ರ ಮಾರ್ಚ್‌ನಿಂದ ವೇತನ ನೀಡಿಲ್ಲ. ಕರೊನಾ ಕಾರಣಕ್ಕೆ ಎಲ್ಲ ವಸತಿ ನಿಲಯಗಳು ಬಂದ್ ಆಗಿವೆ. ಹಾಗಂತ ವೇತನ ಇಲ್ಲವೆನ್ನುವುದು ಸರಿಯಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದ್ದು, ಬಾಕಿ ವೇತನ ಪಾವತಿಸುವುದರ ಜತೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಐದು ವರ್ಷ ಸೇವೆ ಸಲ್ಲಿಸಿದ ಹೊರಗುತ್ತಿಗೆ ಸಿಬ್ಬಂದಿಗೆ, ನೌಕರರ ಕ್ಷೇಮಾಭಿವೃದ್ಧಿ ಯೋಜನೆಯಡಿ ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

    ಸಿಐಟಿಯು ಪದಾಧಿಕಾರಿಗಳಾದ ಆರ್.ಭಾಸ್ಕರ್ ರೆಡ್ಡಿ, ಯಲ್ಲಾಲಿಂಗ, ಹಾಸ್ಟೆಲ್ ನೌಕರರಾದ ರಾಧಮ್ಮ, ಲಕ್ಷ್ಮೀದೇವಿ, ಜಾನಕಿ, ಹುಲಿಗೆಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts