ಒಳಪಂಗಡ ಬದಿಗಿರಿಸಿ ಸಂಘಟಿತರಾಗಲಿ- ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ ಸಲಹೆ

Latest News

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಹೆಬ್ಬಾಳ ಶ್ರೀಬೋಳೋಡಿ ಬಸವೇಶ್ವರ ರಥೋತ್ಸವ ಡಿ.10 ರಂದು

ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಯೋಗಿಗಳ ಮಾಹಿತಿ | ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯ ಕಂಪ್ಲಿ: ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ, ಡಿ.10ರಂದು ಸಂಜೆ...

ಸಾರ್ವಜನಿಕ ಸಮಸ್ಯೆ ನಿರ್ಲಕ್ಷಿಸದಿರಿ- ಅಧಿಕಾರಿಗಳಿಗೆ ಲೋಕಾಯುಕ್ತ ಸಿಪಿಐ ವಸಂತ ಅಸೋದೆ ತಾಕೀತು

ಹೂವಿನಹಡಗಲಿ: ಸಾರ್ವಜನಿಕರ ಸಮಸ್ಯೆಗಳನ್ನು ನಿರ್ಲಕ್ಷಿಸದೆ, ಪರಿಹರಿಸುವುದರ ಜತೆಗೆ ಸೂಕ್ತ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಹೊಸಪೇಟೆ ಲೋಕಾಯುಕ್ತ ಸಿಪಿಐ ವಸಂತ ಅಸೋದೆ ಸೂಚಿಸಿದರು. ಪಟ್ಟಣದ ತಾಪಂ...
ಹೊಸಪೇಟೆಯಲ್ಲಿ ಪಟ್ಟಸಾಲಿ ನೇಕಾರ ಸಮುದಾಯದ ಜಾಗೃತಿ ಸಮಾವೇಶ

ಹೊಸಪೇಟೆ: ರಾಜ್ಯದಲ್ಲಿ ಪದ್ಮಸಾಲಿ, ಪಟ್ಟಸಾಲಿ, ಕುರುಹಿನಶೆಟ್ಟಿ, ದೇವಾಂಗ, ತೊಗಟವೀರ ಸೇರಿ 29 ಒಳಪಂಗಡಗಳು ನೇಕಾರರಲ್ಲಿದ್ದು, ಎಲ್ಲರೂ ಒಂದೇ ಎನ್ನುವ ಭಾವನೆಯಿಂದ ನೇಕಾರರು ಸಂಘಟಿತರಾಗಬೇಕಿದೆ ಎಂದು ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ ತಿಳಿಸಿದರು.

ನಗರದ ಶ್ರೀ ಮಾರ್ಕಂಡೇಶ್ವರಸ್ವಾಮಿ ಕಲ್ಯಾಣ ಮಂಟಪದಲ್ಲಿ ಪಟ್ಟಸಾಲಿ ನೇಕಾರ ಸಮುದಾಯದ ಕ್ಷೇಮಾಭಿವೃದ್ಧಿ ತಾಲೂಕು ಸಂಘ, ಯುವಕರು ಮತ್ತು ಮಹಿಳಾ ಸಂಘ, ಅಖಿಲ ಕರ್ನಾಟಕ ಪಟ್ಟಸಾಲಿ ನೇಕಾರರ ಸಂಘ ಭಾನುವಾರ ಹಮ್ಮಿಕೊಂಡಿದ್ದ ಪಟ್ಟಸಾಲಿ ನೇಕಾರರ ಜಾಗೃತಿ ಸಮಾವೇಶ, ನೂತನ ಸಂಘಗಳ ನಾಮಫಲಕ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನೇಕಾರ ಸಮುದಾಯವು ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದೆ. ಹೀಗಾಗಿ, ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಬೇಕಿದೆ. ಮಕ್ಕಳ ಉನ್ನತ ಶಿಕ್ಷಣಕ್ಕೆ ಸಮುದಾಯವರು ಆಸಕ್ತಿ ಹೊಂದಿ ಉನ್ನತ ಹುದ್ದೆಗಳಿಗೆ ಕಳಿಸುವಂತಾಗಬೇಕು. ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಕೈಮಗ್ಗಗಳು ಮೂಲೆ ಸೇರುವಂತಾಗಿ ನೇಕಾರಿಕೆ ವೃತ್ತಿ ನೇಪಥ್ಯಕ್ಕೆ ಸರಿಯುತ್ತಿದೆ. ಹೀಗಾಗಿ, ಕುಟುಂಬಗಳ ಜೀವನ ನಿರ್ವಹಣೆಯೂ ಕಷ್ಟಕರವಾಗಿದೆ. ಸರ್ಕಾರದ ಸೌಲಭ್ಯ ಪಡೆಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ತಿಳಿಸಿದರು.

ನೇಕಾರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ನಾಲತ್ವಾಡ ಮಾತನಾಡಿ, ಸಮಾಜದ ಗೌರವ ಕಾಪಾಡುವಂಥ ಶ್ರೇಷ್ಠ ವೃತ್ತಿ ನೇಕಾರಿಕೆ. ಬಟ್ಟೆ ನೇಯುವುದರಲ್ಲೇ ಸಾಕಷ್ಟ ಕುಟುಂಬಗಳು ಜೀವನ ನಿರ್ವಹಿಸುತ್ತಿದ್ದವು. ಆದರೀಗ ಆಧುನಿಕತೆಯ ಭರಾಟೆಯಿಂದಾಗಿ ಕೈಮಗ್ಗಗಳಲ್ಲಿ ವೃತ್ತಿ ನಿರತರಿಗೆ ಕೆಲಸ ಇಲ್ಲವಾಗಿದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದೆ. ಆದ್ದರಿಂದ ಸರ್ಕಾರ ನೇಕಾರರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸುವ ಮೂಲಕ ಅಭಿವೃದ್ಧಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.

ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಶ್ರೀ ಗುರುಸಿದ್ಧೇಶ್ವರ ಬೃಹನ್ಮಠದ ಶ್ರೀ ಬಸವರಾಜ ಪಟ್ಟದಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಪಟ್ಟಸಾಲಿ ಸಮುದಾಯದ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಉಪಾಧ್ಯಕ್ಷ ಎನ್.ಆಂಜನೇಯ ಅಧ್ಯಕ್ಷತೆ ವಹಿಸಿದ್ದರು. ಪಟ್ಟಸಾಲಿ ನೇಕಾರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ತಿಪ್ಪೇಸ್ವಾಮಿ, ರಾಜ್ಯ ಉಪಾಧ್ಯಕ್ಷ ಕಾನಹೊಸಹಳ್ಳಿ ಕೆ.ಎನ್.ಭೀಮಣ್ಣ, ಕಾರ್ಯಾಧ್ಯಕ್ಷ ಚಂದ್ರಕಾಂತ್ ಶೇಖಾ, ನಗರಸಭೆ ಮಾಜಿ ಸದಸ್ಯರಾದ ಚಿದಾನಂದಪ್ಪ, ಚಂದ್ರಕಾಂತ ಕಾಮತ್, ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ದೇವಾನಂದ, ಟಿ.ವಿರೂಪಾಕ್ಷಿ ಸೋಮಾಧರಿ, ಎಂ.ಸಣ್ಣರುದ್ರಪ್ಪ, ಎನ್.ರವಿ, ಎನ್.ಟಿ.ಸುಧಾರಾಣಿ, ಶಿಕ್ಷಕ ಕಲ್ಲಹಳ್ಳಿ ಎನ್.ತಿಪ್ಪೇಸ್ವಾಮಿ ಇತರರಿದ್ದರು. ಪಟ್ಟಸಾಲಿ ತಾಲೂಕು ಸಂಘದ ವಿವಿಧ ಘಟಕಗಳ ನಾಮಫಲಕ ಅನಾವರಣಗೊಳಿಸಲಾಯಿತು.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​ ಪಿಸಿ ThinkPadX1: ಚೀನಾದಲ್ಲಿ ಲೆನೊವೊ ಟೆಕ್...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ ಬಿರ್ಲಾರ ಕೋಪಕ್ಕೆ ಕಾರಣವಾದ ರಾಣಿ ಮುಖರ್ಜಿ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...