ಹೊಸಪೇಟೆ: ಪ್ರಯಾಣಿಕರ ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಹಾಗೂ ಸಲಹೆಗಳನ್ನು ಸ್ವೀಕರಿಸಿ ಕಲ್ಪಿಸುವ ನಿಟ್ಟಿನಲ್ಲಿ ಆಗಸ್ಟ್ 5ರಂದು ಮಧ್ಯಾಹ್ನ 3.30 ರಿಂದ 5.30ರವರೆಗೆ ಫೋನ್-ಇನ್ ಕಾರ್ಯಕ್ರಮ ನಡೆಯಲಿದೆ.
ಸಾರ್ವಜನಿಕ ಪ್ರಯಾಣಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯದ ಕೊರತೆ ಇದ್ದಲ್ಲಿ ದೂರವಾಣಿ ಸಂಖ್ಯೆ ಮೊ:7760992302, 6366423886ಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ತಿಳಿಸಲು ಕೋರಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.