More

    ರಸ್ತೆ, ಕುಡಿವ ನೀರಿನ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಆನಂದ ಸಿಂಗ್ ಸೂಚನೆ

    ಹೊಸಪೇಟೆ: ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡ ರಸ್ತೆ ಕಾಮಗಾರಿ, ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಆಶ್ರಯ ಮತ್ತಿತರೆ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಂಭುನಾಥಹಳ್ಳಿ ಸಮೀಪದ 7ಎಕರೆ ಪ್ರದೇಶದಲ್ಲಿ ನಿವೇಶನ ವಿಂಗಡಿಸಿ, ನಗರದ ಎಲ್ಲಾ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಹೊಸಪೇಟೆ ನಗರ ವ್ಯಾಪ್ತಿಯಲ್ಲಿ 30.23 ಎಕರೆ ಖಾಲಿ ಜಾಗವನ್ನು ಗುರುತಿಸಲಾಗಿದ್ದು, ವಸತಿ ರಹಿತರಿಗೆ ನಿವೇಶವನ್ನು ಕಲ್ಪಿಸಲು ಸರ್ಕಾರಕ್ಕೆ ರೂ.150 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಗ್ರಾಮೀಣ ಭಾಗದ ನಿವೇಶನ ರಹಿತರಿಗೆ ವಿವಿಧೆಡೆ 39 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಅಲ್ಲಿ ನಿವೇಶನ ಹಂಚಿಕೆ ಮಾಡಿ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಆದರೂ ಸಹ ಅನೇಕ ನಿವೇಶನ ರಹಿತರಿದ್ದು, ಅವರಿಗೆ ಮನೆಗಳನ್ನು ಕಟ್ಟಿಸಿಕೊಡಲು 97 ಎಕರೆ ಜಮೀನಿನ ಅವಶ್ಯಕತೆ ಇದೆ. ಈ ಜಮೀನನ್ನು ಗುರುತಿಸಲು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಮುಂದಾಗಬೇಕು ಎಂದರು.

    ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಈರಣ್ಣ, ಹೊಸಪೇಟೆ ತಹಸೀಲ್ದಾರ್ ವಿಶ್ವಜೀತ್ ಮೆಹ್ತಾ, ತಾಪಂ ಇಒ ರಮೇಶ ಮತ್ತಿತರ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts