More

    ರಾಣಿ ಸಂಯುಕ್ತಾರೊಂದಿಗೆ ಎಚ್.ಆರ್.ಗವಿಯಪ್ಪ ಮಾತುಕತೆ

    ಹೊಸಪೇಟೆ: ರಾಜ್ಯ ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ 90- ವಿಜಯನಗರ ಕ್ಷೇತ್ರದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

    ಸಿದ್ಧಾರ್ಥ ಸಿಂಗ್ ಗೆ ಟಿಕೆಟ್

    ವಿಜಯನಗರ ಜಿಲ್ಲೆಯ ವಿಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮಹಿಳಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ರಾಣಿ ಸಂಯುಕ್ತ ಅವರಿಗೆ ಈ ಬಾರಿಯೂ ಅವಕಾಶ ತಪ್ಪಿದೆ. ಈ ಬಾರಿ ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್ ಅವರನ್ನು ಪಕ್ಷ ಕಣಕ್ಕಿಳಿಸಿದೆ.

    ಇದನ್ನೂ ಓದಿ: ಮಹಿಳೆಯರನ್ನು ನೋಡುವ ಮನೋಭಾವ ಬದಲಾಗಲಿ

    ಔಪಚಾರಿಕವಾಗಿ ಮಾತುಕತೆ

    ಇದರ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಎಚ್.ಆರ್.ಗವಿಯಪ್ಪ ಅವರು ರಾಣಿ ಸಂಯುಕ್ತ ಅವರ ನಿವಾಸಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿ, ಕೆಲ ಕಾಲ ಔಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಆರ್.ಗವಿಯಪ್ಪ ಕೋರಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಯಾವ ವಿಚಾರವಾಗಿ ಚರ್ಚೆ ನಡೆಸಿದರು ಎಂಬ ಮಾಹಿತಿ ತಿಳಿದು ಬಂದಿಲ್ಲ.

    ಈ ಬಗ್ಗೆ ಪ್ರತಿಕ್ರಿಯಿಸಿದ ರಾಣಿ ಸಂಯುಕ್ತ, ಚುನಾವಣಾ ಪ್ರಚಾರದ ನಿಮಿತ್ತ ವಾರ್ಡ್‌ಗೆ ಬಂದಿದ್ದ ಎಚ್.ಆರ್. ಗವಿಯಪ್ಪ ಮತಯಾಚಿಸಿದರು. ಸಿದ್ದರಾಮಯ್ಯ ಅವರು ಕರೆ ಮಾಡಿರುವ ವಿಚಾರ ನಮ್ಮ ವೈಯಕ್ತಿಕ ಎಂದಷ್ಟೇ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts