ಹೊಸಪೇಟೆ: ತುಂಗಭದ್ರ ನದಿ ಪಾತ್ರದ ಗ್ರಾಮಗಳಿಗೆ ನೋಡಲ್ ಅಧಿಕಾರಿಗಳಿಗೆ ತಾಲೂಕುವಾರು ಮೇಲ್ವಿಚಾರಣಾಧಿಕಾರಿಗಳನ್ನಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಆದೇಶ ಹೊರಡಿಸಿದ್ದಾರೆ.
ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದಾಗಿ ತುಂಗಾಭದ್ರಾ ನದಿಯಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಕಾರಣ ಜಿಲ್ಲೆಯಲ್ಲಿ ನದಿ ಪಾತ್ರದಲ್ಲಿ ಬರುವ ಒಟ್ಟು 11 ಗ್ರಾಮ ಪಂಚಾಯಿತಿಗೆ ಸಂಬAಧಿಸಿದ 22 ಗ್ರಾಮಗಳಿಗೆ ನೋಡಲ್ ಅಧಿಕಾರಿಗಳನ್ನು ಈಗಾಗಲೇ ನೇಮಕ ಮಾಡಲಾಗಿದ್ದು, ಆ ನೋಡಲ್ ಅಧಿಕಾರಿಗಳಿಗೆ ತಾಲೂಕುವಾರು ಮೇಲ್ವಿಚಾರಣಾಧಿಕರಿಗಳನ್ನು ನೇಮಕ ಮಾಡಲಾಗಿದೆ. ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಹಾಲಿ ವಸ್ತು ಸ್ಥಿತಿಯ ಅನುಪಾಲನಾ ವರದಿ ಸಲ್ಲಿಸಬೇಕು. ಹಾಗೂ ಕಾಲಕಾಲಕ್ಕೆ ಕೇಳಲಾಗುವ ವರದಿಗಳನ್ನು ಯಾವುದೇ ವಿಳಂಬವಿಲ್ಲದೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಪ್ರಕಟಣೆಲ್ಲಿ ತಿಳಿಸಿದ್ದಾರೆ.