More

    ನೀತಿ ಸಂಹಿತೆ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಲಿ

    ಹೊಸಪೇಟೆ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದು, ದಿನಪತ್ರಿಕೆ ಮತ್ತು ವಿದ್ಯುನ್ಮಾನ ಸುದ್ದಿ ವಾಹಿನಿಗಳಲ್ಲಿ ಪ್ರಕಟಿಸುವ ಪಾವತಿ ಸುದ್ದಿ, ಸಾಮಾಜಿಕ ಜಾಲತಾಣಗಳಲ್ಲಿ ನಿಯೋಜಿಸಿದ ತಂಡಗಳು ಸೂಕ್ತ ನಿಗಾವಹಿಸಿ ನೀತಿ ಸಂಹಿತೆ ಉಲ್ಲಂಘನೆ ಆಗುವಂತಹ ವರದಿ, ಪೋಸ್ಟ್ ಮಾಡಿದ ವಿನ್ಯಾಸಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ವೆಂಕಟೇಶ ಟಿ. ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಸಿದ್ದ ಮಾದರಿ ನೀತಿ ಸಂಹಿತೆ ಸಭೆಯಲ್ಲಿ ಮಾತನಾಡಿ, ಯಾವುದೇ ರೀತಿಯ ಪಾವತಿಸಿ ಸುದ್ದಿ ಅವಕಾಶ ಇಲ್ಲ. ಸಾಮಾಜಿಕ ಜಾಲತಾಣಗಳ ಮೇಲೂ ಸೂಕ್ತ ನಿಗಾ ವಹಿಸಿ ಪಕ್ಷ, ಮುಖಂಡರ ಕುರಿತು ಅಥವಾ ಮತಯಾಚನೆಗೆ ಸಂಬಂಧಿಸಿದ ಯಾವುದೇ ತೆರನಾದ ವಿನ್ಯಾಸವುಳ್ಳ ಪೋಸ್ಟ್ ಮತ್ತು ಅನಿಮೇಷನ್ ಮಾಡಿದ ವಿಡಿಯೋ ಅಪ್‌ಲೋಡ್ ಮಾಡಿದಲ್ಲಿ ಸಂಬಂಧಿಸಿದ ಅಡ್ಮಿನ್ ಮೇಲೆ ಪ್ರಕರಣ ದಾಖಲಿಸಬೇಕು ಎಂದು ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.

    ರಾಜಕೀಯ ಚಟುವಟಿಕೆ ಮೇಲೆ ನಿಗಾವಹಿಸಿ

    ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗಾಗಿ ಈಗಾಗಲೇ ಜಿಲ್ಲೆಯಾದ್ಯಂತ 23 ಚೆಕ್‌ಪೋಸ್ಟ್‌ಗಳು ಕಾರ್ಯಗತವಾಗಿವೆ. ಚೆಕ್‌ಪೋಸ್ಟ್ ಹೊರತುಪಡಿಸಿ ಗ್ರಾಮೀಣ ಭಾಗಗಳಲ್ಲಿ ಹಾಗೂ ನಗರ ಪ್ರದೇಶದ ವಿವಿಧ ವಾರ್ಡ್‌ಗಳಲ್ಲಿ ನೀತಿ ಸಂಹಿತೆಗೆ ವಿರುದ್ಧವಾಗಿ ನಡೆಯುವ ರಾಜಕೀಯ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು. ಮತದಾರರಿಗೆ ಆಮಿಷ ಒಡ್ಡುವಂತಹ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕು.

    ಕೆಲ ಅಭ್ಯರ್ಥಿಗಳು ಸಿನಿಮಾ ನಟರನ್ನು ಸ್ಟಾರ್ ಪ್ರಚಾರಕರನ್ನಾಗಿ ಬಳಸಿಕೊಳ್ಳುತ್ತಿದ್ದು, ಅಂತಹ ಸ್ಟಾರ್ ಪ್ರಚಾರಕರ ಪೋಸ್ಟರ್ ಕಂಡುಬಂದಲ್ಲಿ ಕೂಡಲೇ ತೆರವುಗೊಳಿಸಬೇಕು. ನೀತಿ ಸಂಹಿತೆ ಕುರಿತು ಹೆಚ್ಚಿನ ನಿಗಾ ವಹಿಸಬೇಕು ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕ್ಷೇತ್ರಗಳಲ್ಲಿ ಯಾವುದೇ ತೆರನಾದ ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

    ಇದನ್ನೂ ಓದಿ: ಸಾಮಾಜಕ ಜಾಲತಾಣಗಳಲ್ಲಿನ ಜಾಹೀರಾತು ಬಗ್ಗೆ ನಿಗಾ ಅಗತ್ಯ: ಮುಖೇಶ್

    ಚುನಾವಣೆ ಜೊತೆಗೆ ಇತರ ಕರ್ತವ್ಯಕ್ಕೂ ಗಮನಹರಿಸಿ ಗ್ರಾಮೀಣ ಭಾಗಗಳಲ್ಲಿ ಬೇಸಿಗೆ ಇರುವ ಕಾರಣದಿಂದ ಕುಡಿಯುವ ನೀರಿನ ಕುರಿತು ಹೆಚ್ಚು ದೂರುಗಳು ಬರುತ್ತಿವೆ. ಇದನ್ನು ಕಡೆಗಣಿಸದೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕುಡಿಯುವ ನೀರಿನ ಸೂಕ್ತ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

    ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಬಿ. ಸದಾಶಿವ ಪ್ರಭು, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಪ್ರಾದೇಶಿಕ ಸಾರಿಗೆ ಆಯುಕ್ತ ವಸಂತ್ ಚವ್ಹಾಣ್, ತಹಸೀಲ್ದಾರ್ ಪ್ರತಿಭಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts