More

    ನಿಗದಿಯಂತೆ ಬಿತ್ತನೆಯಾಗಲಿ

    ಹೊಸಪೇಟೆ: ತಾಲೂಕುವಾರು ಬಿತ್ತನೆ ಪ್ರಗತಿಯ ಅನುಸಾರ ಕೃಷಿ ಇಲಾಖೆ ಅಧಿಕಾರಿಗಳು ಮುತುವರ್ಜಿವಹಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಸೂಚನೆ ನೀಡಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು. ಮುಂಗಾರು ಹಂಗಾಮಿನಲ್ಲಿ ರಿಯಾಯಿತಿ ದರದಲ್ಲಿ ದೊರೆಯುವ ಬಿತ್ತನೆ ಬೀಜ ಹಾಗೂ ಗೊಬ್ಬರ ದಾಸ್ತಾನು ಬಗ್ಗೆ ರೈತ ಸಂಪರ್ಕ ಕೇಂದ್ರ, ಗ್ರಾಪಂಗಳಲ್ಲಿ ಮಾಹಿತಿ ಫಲಕ ಹಾಕಬೇಕು. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರಿನಲ್ಲಿ ಜನ-ಜಾನುವಾರು ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಬೇಕು ಎಂದರು.

    ಹೊಸಪೇಟೆ ತಾಲೂಕಿ ಎಂಟು, ಕೂಡ್ಲಿಗೆ 17, ಕೊಟ್ಟೂರು 7, ಹರಪನಹಳ್ಳಿ 29. ಹಡಗಲಿ 12 ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ 18 ಗ್ರಾಪಂ ವ್ಯಾಪ್ತಿಯ 196 ಹಳ್ಳಿಗಳಲ್ಲಿ ಖಾಸಗಿ ಬೋರ್‌ವೆಲ್‌ಗಳ ಮೂಲಕ ಕುಡಿವ ನೀರಿನ ಸರಬರಾಜು ಮಾಡಲಾಗುತ್ತಿದೆ. ಮಳೆ ಕೊರತೆ ಮುಂದುವರಿದಲ್ಲಿ ಮುಂಬರುವ ದಿನಗಳಲ್ಲಿ ಕುಡಿವ ನೀರಿಗೆ ತೊಂದರೆಯಾಗಬಹುದು. ಗ್ರಾಮಗಳು ಮತ್ತು ವಾರ್ಡ್‌ಗಳಲ್ಲಿ 602 ಬೋರ್‌ವೆಲ್ ಗಳನ್ನು ಗುರುತಿಸಲಾಗಿದೆ. ಈ ಪೈಕಿ ಈಗಾಗಲೇ 485 ಬೋರವೆಲ್‌ಗಳೊಂದಿಗೆ ಮುಂಗಡ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು. ಮೇ 1 ರಿಂದ 22ರವರೆಗೆ ಜಿಲ್ಲೆಯಲ್ಲಿ ವಾಡಿಕೆ ಮಳೆ 39 ಮಿಮೀ ಮೀರಿ 75 ಮಿಮಿ ಮಳೆಯಾಗಿದೆ. ಮುಂಗಾರು ಹಂಗಾಮಿನಲ್ಲಿ ನಿಗದಿತ ಗುರಿಯಂತೆ ತಾಲೂಕುವಾರು ಬಿತ್ತನೆ ಆಗಬೇಕು ಎಂದು ಸೂಚಿಸಿದರು.

    ಜಿಪಂ ಸಿಇಒ ಸದಾಶಿವ ಪ್ರಭು ಮಾತನಾಡಿ, ವಿಜಯನಗರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಉತ್ತಮ ಮಳೆ ಸುರಿದಿದೆ. ಗ್ರಾಮಗಳಲ್ಲಿ ನೀರು ನಿಲ್ಲದಂತೆ ತಗ್ಗು ಪ್ರದೇಶಗಳನ್ನು ಸಮತಟ್ಟುಗೊಳಿಸಬೇಕು. ಚರಂಡಿಗಳನ್ನು ದುರಸ್ತಿ ಮಾಡಿಸಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts