More

    ಟಿಬಿ ಡ್ಯಾಂ ಭರ್ತಿಗೆ ಎಂಟು ಅಡಿ ಬಾಕಿ : ಸುರಕ್ಷಿತ ಸ್ಥಳಕ್ಕೆ ತೆರಳಲು ನದಿಪಾತ್ರದ ಜನರಿಗೆ ಸೂಚನೆ


    ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚುವ ಸಂಭವವಿದ್ದು, ನದಿಗೆ ಯಾವುದೇ ಕ್ಷಣದಲ್ಲಾದರೂ ನೀರು ಬಿಡುವ ಸಾಧ್ಯತೆ ಇದೆ. ಆದ್ದರಿಂದ ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತುಂಗಭದ್ರಾ ಆಡಳಿತ ಮಂಡಳಿ ತಿಳಿಸಿದೆ.

    ಜಲಾಶಯದಲ್ಲಿ 1625.14 ಅಡಿ ನೀರು ಇದ್ದು, 73.357 ಟಿಎಂಸಿ ಅಡಿ ಸಂಗ್ರಹವಾಗಿದೆ. ಜಲಾಶಯ ಭರ್ತಿಯಾಗಲು ಕೇವಲ 8 ಅಡಿ ಬಾಕಿ ಇದೆ. ಸದ್ಯ 1,20,411 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಸೆಂಟ್ರಲ್ ವಾಟರ್ ಕಮಿಷನ್ ಹವಾಮಾನದ ಬಗ್ಗೆ ತಿಳಿಸಿದ್ದು, ಶಿವಮೊಗ್ಗದಿಂದ ನದಿಗೆ 2,11,890 ಕ್ಯೂಸೆಕ್ ನೀರು ಹರಿದು ಬರುವ ಸಾಧ್ಯತೆ ಇದೆ. ಹಾಗಾಗಿ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರಲಿದೆ. ಜು.25 ರಂದು ಯಾವುದೇ ಸಂದರ್ಭದಲ್ಲಿ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಕಾರಣ ನದಿ ಪಾತ್ರದ ಜನರು ಮುನ್ನೆಚ್ಚರಿಕೆಯಾಗಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕು.

    2019 ರಲ್ಲಿ ಅವಧಿಗೂ ಮುನ್ನ ಜಲಾಶಯ ಭರ್ತಿಯಾಗಿ ನದಿಗೆ ನೀರು ಬಿಟ್ಟಿದ್ದರಿಂದ ನದಿ ಪಾತ್ರದ ಕೆಲವೆಡೆ ಪ್ರವಾಹ ಸ್ಥಿತಿ ಉಂಟಾಗಿತ್ತು. ಎಡದಂಡೆ ಕೆಳಮಟ್ಟದ ಕಾಲುವೆಗೆ 32,46 ಕ್ಯೂಸೆಕ್, ಬಲದಂಡೆ ಮೇಲ್ಮಟ್ಟದ ಕಾಲುವೆಗೆ 2479 ಕ್ಯೂಸೆಕ್, ಬಲದಂಡೆ ಕೆಳಮಟ್ಟದ ಕಾಲುವೆಗೆ 500 ಕ್ಯೂಸೆಕ್ ಹಾಗೂ ರಾಯ-ಬಸವ ಕಾಲುವೆಗೆ 252 ಕ್ಯೂಸೆಕ್ ನೀರು ಬಿಡಲಾಗಿದೆ. ಎಲ್ಲ ಕಾಲುವೆಗಳಿಗೆ ಒಟ್ಟು 5,214 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ ಎಂದು ಟಿಬಿ ಬೋರ್ಡ್ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts