More

    ಕ್ಷಯರೋಗ ಪತ್ತೆ ಸಮೀಕ್ಷೆ ಜಾಥಾಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಲೀಂ ಚಾಲನೆ

    ಹೊಸಪೇಟೆ: ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯಕ್ರಮದ ನಿಮಿತ್ತ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಲೀಂ ಚಾಲನೆ ನೀಡಿದರು.

    ಬಳಿಕ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಕಲ್ಪದಂತೆ 2015ಕ್ಕೆ ಕ್ಷಯ ರೋಗ ಮುಕ್ತಗೊಳಿಸಬೇಕು. ಅದರ ಭಾಗವಾಗಿ ಜು.18 ರಿಂದ 15 ದಿನ ಕ್ಷಯ ಪತ್ತೆ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಆಶಾ ಕಾರ್ಯಕರ್ತೆ, ಆರೋಗ್ಯ ಸಹಾಯಕರು ಹಾಗೂ ಆರೋಗ್ಯ ಇಲಾಖೆಯ ಡಿ ಗ್ರುಪ್ ನೌಕರರನ್ನು ಒಳಗೊಂಡಂತೆ 500 ತಂಡಗಳನ್ನು ರಚಿಸಲಾಗಿದೆ. ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸುವರು ಎಂದರು.

    ಯಾರಾಗಿದಾರೂ ಸಂಜೆಯಾಗುತ್ತಿದ್ದಂತೆ ಜ್ವರ ಕಾಣಿಸಿಕೊಳ್ಳುವುದು, ಕೆಮ್ಮು, ಧಮ್ಮು, ರಕ್ತ ಮಿಶ್ರಿತ ಕಫ ಕಾಣಿಸಿಕೊಳ್ಳುತ್ತಿದ್ದರೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಟ್ಟು, ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು.

    ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಜಗದೀಶ್ ಪಾಟ್ನೇ, ಡಾ.ಜಂಬಯ್ಯ. ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ.ಭಾಸ್ಕರ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ. ಭಾಸ್ಕರ, ಚಂದ್ರಪ್ಪ, ಆರೋಗ್ಯ ಮತ್ತು ಅಶಾ ಕಾರ್ಯಕರ್ತರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts