Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News

ಆಂಧ್ರಪ್ರದೇಶ, ತೆಲಂಗಾಣಕ್ಕೆ ಹರಿಸುತ್ತಿರುವ ನೀರು ನಿಲ್ಲಿಸಿ

Sunday, 25.02.2018, 3:00 AM       No Comments

ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ಆಂಧ್ರ ಮತ್ತು ತೆಲಂಗಾಣ ರಾಜ್ಯಕ್ಕೆ ಹರಿಸುತ್ತಿರುವ ನದಿ ನೀರನ್ನು ಕೂಡಲೇ ನಿಲ್ಲಿಸುವಂತೆ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ನೇತೃತ್ವದದಲ್ಲಿ ಸಿಂಧನೂರಿನ ಐವತ್ತಕ್ಕೂ ಹೆಚ್ಚು ರೈತ ಮುಖಂಡರು ತುಂಗಭದ್ರಾ ಬೋರ್ಡ್ ಚೇರ‌್ಮನ್ ರಂಗಾರೆಡ್ಡಿರನ್ನು ಒತ್ತಾಯಿಸಿದರು.

ನಗರದ ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಕಚೇರಿಗೆ ಶನಿವಾರ ಭೇಟಿ ನೀಡಿದ ಅವರು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಹೈದರಾಬಾದ್‌ನಲ್ಲಿದ್ದ ಮಂಡಳಿ ಅಧ್ಯಕ್ಷ ರಂಗಾರೆಡ್ಡಿ ಜತೆ ದೂರವಾಣಿಯಲ್ಲಿ ಮಾತನಾಡಿದರು. ಜಲಾಶಯದ ಬಲದಂಡೆ ಮುಖ್ಯ ಕಾಲುವೆಯಿಂದ 2.8 ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಳಕೆ ಮಾಡಲಾಗಿದೆ. ಹೆಚ್ಚುವರಿಯಾಗಿ ಹರಿಸಿದ ನೀರಿನಲ್ಲಿ ಕರ್ನಾಟಕದ ಪಾಲು 1.4 ಮತ್ತು ಆಂಧ್ರ ಪಾಲು 1.4 ಟಿಎಂಸಿ ಇದೆ. ಆಂಧ್ರಕ್ಕೆ ಸರಿಯಾಗಿ ನೀರು ಹರಿಸಲಾಗುತ್ತದೆ. ಕರ್ನಾಟಕದ್ದು ಮಾತ್ರ ಎಡದಂಡೆಯಲ್ಲಿ ಹರಿಸುವ ನೀರಿನಲ್ಲಿ ಕಡಿಮೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ತುಂಗಭದ್ರಾ ಜಲಾಶಯದಿಂದ ನದಿ ಮೂಲಕ ಆಂಧ್ರಕ್ಕೆ ಮೇ ತಿಂಗಳವರೆಗೂ ನೀರು ಹರಿಸಬೇಕೆಂಬ ಒಡಂಬಡಿಕೆ ಇದ್ದು, ಈಗಲೇ ಹರಿಸಬಾರದು.ಆದ್ದರಿಂದ ನದಿಗೆ ಬಿಡುವ ನೀರನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈಗಲೇ ನೀರು ಹರಿಸಿದರೆ ಸಂಗ್ರಹಗೊಂಡ ನೀರಿನ ಪ್ರಮಾಣ ಕಡಿಮೆ ಆದಲ್ಲಿ ಸಿಂಧನೂರು ಭಾಗಕ್ಕೆ ಹರಿಸವಾಗ ಕಾಲುವೆಯ ಟ್ಯೂಬ್ ಎತ್ತರ ಇರುವುದರಿಂದ ನೀರು ಸರಾಗವಾಗಿ ಹರಿಯಲ್ಲ. ಇದರಿಂದ ಈ ಭಾಗದ ರೈತರಿಗೆ ಅನ್ಯಾಯವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕೆ ರಂಗಾರೆಡ್ಡಿ ಅವರು ಸಮ್ಮತಿ ಸೂಚಿಸಿದರು ಎನ್ನಲಾಗಿದೆ. ಈ ವೇಳೆ ಸಿಂಧನೂರು ಜಿಪಂ ಸದಸ್ಯ ಶಿವನಗೌಡ, ರೈತ ಮುಖಂಡರಾದ ಹನುಮನಗೌಡ ಇತರರಿದ್ದರು.

Leave a Reply

Your email address will not be published. Required fields are marked *

Back To Top