More

    ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್: ಹೊಸಪೇಟೆ ಸರ್ಕಾರಿ ಪ್ರೌಢಶಾಲೆ ಬಂದ್; 396 ಮಕ್ಕಳಿಗೆ ಆರ್‌ಟಿಪಿಸಿಆರ್ ಟೆಸ್ಟ್

    ಹೊಸಪೇಟೆ: ನಗರದ ಸರ್ಕಾರಿ ಪ್ರೌಢಶಾಲೆ 8ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

    ತಾಲೂಕು ಆರೋಗ್ಯ ಇಲಾಖೆಯಿಂದ ಒಂದು ವಾರದಿಂದ ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಈ ವೇಳೆ ಕೋವಿಡ್ ದೃಢಪಟ್ಟಿದೆ. ಶುಕ್ರವಾರ ಒಬ್ಬ ವಿದ್ಯಾರ್ಥಿಗೆ ಸೋಂಕು ಕಾಣಿಸಿಕೊಂಡಿತ್ತು. ಶನಿವಾರ ಮತ್ತೊಬ್ಬ ವಿದ್ಯಾರ್ಥಿಗೆ ಸೋಂಕು ತಗುಲಿದೆ. ಕೂಡಲೇ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ, ಎರಡು ದಿನಗಳಲ್ಲಿ 396 ವಿದ್ಯಾರ್ಥಿಗಳ ಗಂಟಲು ದ್ರವದ ಮಾದರಿ ಪಡೆದು, ಆರ್‌ಟಿಪಿಸಿಆರ್ ಟೆಸ್ಟ್‌ಗೆ ಕಳುಹಿಸಿದ್ದು, ವರದಿ ಬರಬೇಕಿದೆ. ಕೋವಿಡ್ ದೃಢಪಟ್ಟಿರುವ ಮಕ್ಕಳ ಕುಟುಂಬಸ್ಥರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಕಾಣಿಸಿಕೊಂಡ ಕಾರಣ ಶನಿವಾರ ಶಾಲೆ ಬಂದ್ ಮಾಡಲಾಗಿದೆ.

    ಶನಿವಾರ ಬೆಳಗ್ಗೆ ನಗರಸಭೆ ಸಿಬ್ಬಂದಿ ಶಾಲೆಯ ಕೊಠಡಿಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿದ್ದಾರೆ. ಇಬ್ಬರು ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಡುತ್ತಿದ್ದಂತೆ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಾಗೂ ಕೋವಿಡ್ ಪರೀಕ್ಷೆ ಮಾಡಿಸಲು ಹಿಂದೇಟು ಹಾಕುತ್ತಿದ್ದಾರೆ.

    ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾದ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಈ ವೇಳೆ ನಗರದ ಸರ್ಕಾರಿ ಪ್ರೌಢಶಾಲೆಯ ಇಬ್ಬರು ಮಕ್ಕಳಿಗೆ ಸೋಂಕು ದೃಢಪಟ್ಟಿದೆ. ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ.
    | ಅನಿರುದ್ಧ್ ಶ್ರವಣ್, ಜಿಲ್ಲಾಧಿಕಾರಿ, ವಿಜಯನಗರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts