ಯುಆರ್‌ಡಬ್ಲ್ಯೂ ಹುದ್ದೆಗೆ ಅರ್ಜಿ

ಹೊಸಪೇಟೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹಗರಿಬೊಮ್ಮನಹಳ್ಳಿ ಪುರಸಭೆಯಲ್ಲಿ ಮತ್ತು ಕೂಡ್ಲಿಗಿ ಪಟ್ಟಣ ಪಂಚಾಯತಿಯಲ್ಲಿ ಖಾಲಿ ಇರುವ ತಲಾ ಒಂದು ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನರು ಅವಶ್ಯಕ ದಾಖಲೆಗಳೊಂದಿಗೆ ನಿಗದಿತ ಅರ್ಜಿಯ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಎಮ್‌ಆರ್‌ಡಬ್ಲ್ಯೂ ಲಕ್ಷಣ ಮೊ: 9741185924, ಕೂಡ್ಲಿಗಿ ತಾಲ್ಲೂಕಿನ ಎಮ್‌ಆರ್‌ಡಬ್ಲ್ಯೂ ಚೌಡೇಶ ಬಿ.ಹೆಚ್. ಮೊ: 8217626361 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ನಗರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…