More

    ಮತದಾನದಿಂದ ಅಕ್ಷರಸ್ಥರು ದೂರ

    ಹೊಸಪೇಟೆ: ಸಂವಿಧಾನ ನೀಡಿರುವ ಮತದಾನ ಹಕ್ಕನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿ ಅರ್ಹರನ್ನು ಆಯ್ಕೆ ಮಾಡುವುದು ನಮ್ಮ ಕರ್ತವ್ಯ ಎಂದು ವಿಜಯನಗರ ಜಿಪಂ ಮುಖ್ಯ ಯೋಜನಾಧಿಕಾರಿ ಅನ್ನದಾನೇಶ್ವರ ಸ್ವಾಮಿ ಹೇಳಿದರು.

    ಕನ್ನಡ ವಿವಿಯ ಮಂಟಪ ಸಭಾಂಗಣದಲ್ಲಿ ಒನಕೆ ಓಬವ್ವ ಅಧ್ಯಯನ ಪೀಠ, ಅಭಿವೃದ್ಧಿ ಅಧ್ಯಯನ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    18 ವರ್ಷ ಮೇಲ್ಪಟ್ಟ ಎಲ್ಲರೂ ಹೆಸರನ್ನು ನೋಂದಾಯಿಸಿಕೊಂಡು ಕಡ್ಡಾಯವಾಗಿ ಮತ ಚಲಾಯಿಸಬೇಕು. ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮೀಣ ಪ್ರದೇಶದಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಜನರು ಹೆಚ್ಚಾಗಿ ಭಾಗವಹಿಸುತ್ತಾರೆ. ಅಕ್ಷರಸ್ಥರು ಮತದಾನ ಪ್ರಕ್ರಿಯೆಯಿಂದ ದೂರ ಉಳಿಯುತ್ತಿರುವುದು ನೋವಿನ ಸಂಗತಿ. ಈ ನಿಟ್ಟಿನಲ್ಲಿ ಹೈಸ್ಕೂಲ್, ಕಾಲೇಜ್ ಹಾಗೂ ವಿವಿ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರಜ್ಞೆ ಹಾಗೂ ಚುನಾವಣೆಯ ಪ್ರಾಮುಖ್ಯತೆಯನ್ನು ರಸಪ್ರಶ್ನೆ, ಬೀದಿ ನಾಟಕ, ಕಲ್ಪಿತ ಸಂಸತ್ತು, ಪ್ರಬಂಧ ಸ್ಪರ್ಧೆ, ಜಾಹೀರಾತುಗಳ ಮೂಲಕ ಮತದಾನದ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

    ವಿವಿ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಮಾತನಾಡಿದರು. ವಿವಿಯ ಅಧ್ಯಯನಾಂಗದ ನಿರ್ದೇಶಕ ಡಾ.ಅಮರೇಶ ಯತಗಲ್ ಮಾತನಾಡಿದರು. ಕರ್ನಾಟಕ ವಿವಿ ಪ್ರಾಧ್ಯಾಪಕ ಬಸವರಾಜ ಹನುಮಂತಪ್ಪ ಗುಜಲರ್, ಕನ್ನಡ ವಿವಿ ಒನಕೆ ಓಬವ್ವ ಅಧ್ಯಯನ ಪೀಠದ ಸಂಚಾಲಕ ಡಾ.ಎ.ಶ್ರೀಧರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts