More

    ಗೃಹಲಕ್ಷ್ಮೀ ಯೋಜನೆ ನೋಂದಣಿ ಇಂದಿನಿಂದ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾಹಿತಿ

    ಹೊಸಪೇಟೆ: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆ ಗುರುವಾರದಿಂದ ಜಿಲ್ಲೆಯಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

    ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಅರ್ಜಿದಾರರು ನೋಂದಾಯಿಸಲು ಅವಕಾಶವಿದ್ದು, ಗ್ರಾಮೀಣ ಪ್ರದೇಶಗಳಲ್ಲಿ 130 ಗ್ರಾಮ-ಒನ್ ಕೇಂದ್ರಗಳು, 6 ಕರ್ನಾಟಕ ಒನ್ ಕೇಂದ್ರಗಳು, 137 ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನಗರ ಪ್ರದೇಶದಲ್ಲಿ 25 ಗೃಹಲಕ್ಷ್ಮೀ ಯೋಜನೆ ನೋಂದಣಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಆಸಕ್ತರು ಸಂಬಂಧಿಸಿದ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    ಪಡಿತರ ಚೀಟಿಯಲ್ಲಿ ‘ಯಜಮಾನಿ ಮಹಿಳೆ’ ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಲಿದ್ದು, ಫಲಾನುಭವಿ ಯಜಮಾನಿ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ಟಿ ಪಾವತಿದಾರರಾಗಿದ್ದಲ್ಲಿ ಯೋಜನೆ ಅನ್ವಯಿಸುವುದಿಲ್ಲ. ಫಲಾನುಭವಿಗೆ ನೋಂದಣಿಯ ದಿನಾಂಕ, ಸಮಯ ಹಾಗೂ ನೋಂದಾವಣಿ ಮಾಡಿಸುವ ಸ್ಥಳದ ವಿವರಗಳನ್ನು ಎಸ್‌ಎಂಎಸ್ ಮೂಲಕ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: ಗೃಹಲಕ್ಷ್ಮೀ ನೋಂದಣಿಗೆಂದು 479 ಕೇಂದ್ರ ಸ್ಥಾಪನೆ: ಯೋಜನೆ ಫಲಾನುಭವಿಯಾಗಲು ಯಾವೆಲ್ಲ ದಾಖಲೆ ಬೇಕು ಗೊತ್ತಾ?

    ಯೋಜನೆಯಲ್ಲಿ ಉಂಟಾಗಬಹುದಾದ ತಾಂತ್ರಿಕ ಸಮಸ್ಯೆಗಳ ನಿವಾರಣೆಗಾಗಿ ನಗರ ಪ್ರದೇಶದಲ್ಲಿ ನಿಗದಿಪಡಿಸಿರುವ ಕೇಂದ್ರಗಳಿಗೆ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಸಿಬ್ಬಂದಿಯನ್ನು ಮೇಲ್ವಿಚಾರಣಾ ಅಧಿಕಾರಿ ಮತ್ತು ಸಂಬಂಧಪಟ್ಟ ಪೌರಾಯುಕ್ತರು, ಮುಖ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ಗ್ರಾಮ-ಒನ್, ಬಾಪೂಜಿ ಸೇವಾ ಕೇಂದ್ರಗಳಿಗೆ ಸದರಿ ಕೇಂದ್ರಗಳ ಮೇಲ್ವಿಚಾರಕರನ್ನು ಹಾಗೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪ್ರತಿ ತಾಲೂಕು ತಾಂತ್ರಿಕ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಲಾಗಿದೆ.

    ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕರು(ಪ್ರಜಾಪ್ರತಿನಿಧಿ) ತಮ್ಮ ಮನೆಗಳಿಗೆ ಭೇಟಿ ನೀಡಿದಾಗ ನೋಂದಾಯಿಸಿಕೊಳ್ಳಬಹುದು. ನೋಂದಾಯಿತ ಕೇಂದ್ರಗಳ ಮೂಲಕ ಮಂಜೂರಾತಿ ಪತ್ರವನ್ನೂ ಪಡೆಯಬಹುದಾಗಿದೆ. ಫಲಾನುಭವಿ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಗೆ ಕರೆ ಮಾಡಿ ಅಥವಾ 8147500500 ನಂಬರ್‌ಗೆ ಎಸ್‌ಎಂಎಸ್ ಕಳುಹಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts