More

    ಗವಿಯಪ್ಪ ಸೇರ್ಪಡೆಗೆ ವಿರೋಧ?
    ಕಾಂಗ್ರೆಸ್ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ

    ಹೊಸಪೇಟೆ: ಮಾಜಿ ಶಾಸಕ ಎಚ್.ಆರ್.ಗವಿಯಪ್ಪ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಪಕ್ಷದ ವಿವಿಧ ಬ್ಲಾಕ್ ಗಳ ನೂರಾರು ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ‌ ಸಲ್ಲಿಸಿದ್ದಾರೆ.
    ವಿಜಯನಗರ ಜಿಲ್ಲೆಯ ವಿಜಯನಗರ ವಿಧಾನಸಭಾ ಕ್ಷೇತ್ರ-೯೦ ರ ವ್ಯಾಪ್ತಿಯ ಕಮಲಪುರ‌ ಮತ್ತು ಹೊಸಪೇಟೆ ಬ್ಲಾಕ್ ನ ಮುಂಚೂಣಿ ಘಟಕಗಳ ಬಹುತೇಕ ಪದಾಧಿಕಾರಿಗಳು, ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ರವಾನಿಸಿದ್ದಾರೆ ಎನ್ನಲಾಗಿದೆ.
    ಪಕ್ಷದಲ್ಲಿ ಇತ್ತೀಚಿನ ಬೆಳವಣಿಗೆಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳಿಗೆ ತಿಳಿಸದೆ ಬಿಜೆಪಿ ನಾಯಕರನ್ನು ಸೇರ್ಪಡೆ ಮಾಡಿಕೊಳ್ಳುತ್ತಿರುವುದು ತೀವ್ರ ಬೇಸರ ತಂದಿದೆ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.‌
    ಹೀಗಾಗಿ ಪಕ್ಷದ ಹೊಸಪೇಟೆ ಮತ್ತು ಕಮಲಾಪುರ ಬ್ಲಾಕ್ ಗಳ ಎಲ್ಲ ಮುಂಚೂಣಿ ಘಟಕಗಳ ಪದಾಧಿಕಾರಿ ಹುದ್ದೆಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ. ಇನ್ನುಮುಂದೆ ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷದಲ್ಲಿ ಮುಂದುವರಿಯುತ್ತೇವೆ ಎಂದು ರಾಜೀನಾಮೆ‌ ಪತ್ರದಲ್ಲಿ ತಿಳಿಸಿದ್ದಾರೆ.

    ಪಕ್ಷದಲ್ಲಿ ಕೆಲವರು ಅಸಮಾಧಾನದಿಂದ ರಾಜೀನಾಮೆ ಬರೆದಿದ್ದರು. ಆದರೆ, ಪಕ್ಷದ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತಿತರೆ ನಾಯಕರು ಫೋನ್ ಮಾಡಿ, ಅಂತಹ ನಿರ್ಧಾರ ಕೈಗೊಳ್ಳದಂತೆ ತಿಳಿಸಿದ್ದಾರೆ. ಸದ್ಯದಲ್ಲಿಯೇ ಹೊಸಪೇಟೆಗೆ ಬಂದು ಎಲ್ಲರ ಮನವೊಲಿಸುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಸಾಮೂಹಿಕ ರಾಜೀನಾಮೆಯನ್ನು ತಡೆ ಹಿಡಿದಿದ್ದೇವೆ.
    – ವಿನಾಯಕ ಶೆಟ್ಟರ್, ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts