ಟಿಟಿ ವ್ಯಾನ್-ಕಾರು ಡಿಕ್ಕಿ

ಭಾಗಮಂಡಲ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಟಿಟಿ ವ್ಯಾನ್ ಹಾಗೂ ಮಾರುತಿ 800 ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ.
ಟಿಟಿ ವ್ಯಾನ್ ಮೈಸೂರಿನಿಂದ ಭಾಗಮಂಡಲ ಕಡೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿತ್ತು. ಈ ವೇಳೆ ರಸ್ತೆ ತಿರುವಿನಲ್ಲಿ ಎದುರಿನಿಂದ ಬಂದ ಕಾರಿಗೆ ನಿಯಂತ್ರಣ ಸಿಗದೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಾನ್ ರಸ್ತೆ ಬದಿಗೆ ಪಲ್ಟಿಯಾಗಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನ ಚಾಲಕ ಗಗನ್ ತೀವ್ರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *