More

    ಆಸ್ಪತ್ರೆಗೆ ಹೆಚ್ಚುವರಿ ಅನುದಾನ

    ಚಿಕ್ಕೋಡಿ: ಕರೊನಾ ಹಿನ್ನೆಲೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನ ವಿಳಂಬವಾಗಿದೆ. ಮುಂದಿನ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.

    ಬುಧವಾರ ನಿಪ್ಪಾಣಿ ನಗರದ ಸಮಾಧಿಮಠದ ಗೋಶಾಲೆಗೆ ಭೇಟಿ ನೀಡಿದ ಬಳಿಕ ಎಪಿಎಂಎಸ್ ಆವರಣದಲ್ಲಿ 2019-20ನೇ ಸಾಲಿನ
    ಆರ್‌ಐಡಿಎಫ್ ಟ್ರ್ಯಾಂಚ್-25 ಅಡಿ ಮಂಜೂರಾದ ಪಶು ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ನಿಪ್ಪಾಣಿಯಲ್ಲಿ 40 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಈ ಆಸ್ಪತ್ರೆಗೆ ಹೆಚ್ಚುವರಿಯಾಗಿ ಮತ್ತೆ 20 ಲಕ್ಷ ರೂ. ಅನುದಾನವನ್ನು ಶೀಘ್ರ ಮಂಜೂರು ಮಾಡಲಾಗುವುದು. ಪಶು ವೈದ್ಯರು ಹಳ್ಳಿಗಳಿಗೆ ಹೋಗಿ ಸಕಾಲಕ್ಕೆ ಸೇವೆ ನೀಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಈ ಕುರಿತು ಪರಿಶೀಲಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

    ಹುದ್ದೆ ಭರ್ತಿಗೆ ಮನವಿ: ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ನಿಪ್ಪಾಣಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ಆಸ್ಪತ್ರೆಗಳು ಶಿಥಿಲಗೊಂಡಿವೆ. ಅವುಗಳ ಅಭಿವೃದ್ಧಿಗೆ ಸಚಿವರು ಅನುದಾನ ಮಂಜೂರು ಮಾಡಬೇಕು. ಪಶು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು ಎಂದು ಸಮಾರಂಭದಲ್ಲಿ ಒತ್ತಾಯಿಸಿದರು. ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿದರು. ನಿಪ್ಪಾಣಿ ಸಮಾಧಿಮಠದ ಪ್ರಾಣಲಿಂಗ ಸ್ವಾಮೀಜಿ, ಪ್ರವೀಣ ಭಾಟಲೆ, ಸುಮಿತ್ರಾ ಉಗಳೆ, ಸಿದ್ದು ನರಾಟೆ, ಹಾಲಶುಗರ್ ಅಧ್ಯಕ್ಷ ಚಂದ್ರಶೇಖರ ಕೋಟಿವಾಲೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಸರೋಜಾ, ಪಶುಸಂಗೋಪನಾಇಲಾಖೆ ಆಯಕ್ತ ಬಸವರಾಜೇಂದ್ರ, ಡಾ.ಜಯಕುಮಾರ ಕಂಕಣವಾಡಿ, ಪಪ್ಪು ಪಾಟೀಲ, ಮಹಾವೀರ ಬೋರಣ್ಣವರ, ಸುರೇಶ ಅಂಗಡಿ ಇದ್ದರು.

    ದೀಪಾವಳಿ ಆಫರ್ ನೀಡಿರುವ ಸಿಎಂ

    ಸಿಎಂ ಯಡಿಯೂರಪ್ಪ ಅವರು ಮರಾಠಾಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿ, 50 ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ. ಜತೆಗೆ, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಘೋಷಣೆಯಾಗಿದೆ. ಈ ಮೂಲಕ ಉಭಯ ಸಮುದಾಯದ ಜನರಿಗೆ ಸಿಎಂ ಯಡಿಯೂರಪ್ಪ ಅವರು ದೀಪಾವಳಿ ಗಿಫ್ಟ್ ನೀಡಿದ್ದಾರೆ ಎಂದು ಸಚಿವ ಪ್ರಭು ಸಂತಸ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts