ಕನ್ನಡದ ಖ್ಯಾತ ಸಿನಿಮಾ ನಿರ್ದೇಶಕ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಸಿನಿಮಾದ ಖ್ಯಾತ ನಿರ್ದೇಶಕ ಎಂ.ಎಸ್‌.ರಾಜಶೇಖರ್‌ ಅವರನ್ನು ಆಸ್ಪತ್ರೆಗೆ ದಾಖಲಾಗಿದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ರಾಜಶೇಖರ್‌ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕನ್ನಡ ಚಿತ್ರರಂಗದಲ್ಲಿ ಹಲವು ಹಿಟ್ ಸಿನಿಮಾ ಕೊಟ್ಟಿದ್ದ ಅವರು, ಡಾ. ರಾಜ್ ಕುಮಾರ್ ಅಭಿನಯದ ಧ್ರುವತಾರೆ ಸಿನಿಮಾವನ್ನು ನಿರ್ದೇಶಿಸಿದ್ದರು. ಅಲ್ಲದೆ ರಥಸಪ್ತಮಿ, ನಂಜುಡಿ ಕಲ್ಯಾಣ, ಮನಮೆಚ್ಚಿದ ಹುಡುಗಿ ಚಿತ್ರಗಳನ್ನು ಕೂಡ ನಿರ್ದೇಶಿಸಿದ್ದರು. (ದಿಗ್ವಿಜಯ ನ್ಯೂಸ್)