More

    ಸಂಚಾರಿ ಆರೋಗ್ಯ ಕ್ಲಿನಿಕ್‌ಗೆ ಚಾಲನೆ: ಪ್ರತಿ ದಿನವೂ ಒಂದು ತಾಲೂಕಿಗೆ ಸಂಚಾರ

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಆರೋಗ್ಯ ಸೇವೆ ನೀಡುವ ಶ್ರಮಿಕ್ ಸಂಜೀವಿನಿ-ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನ ಸಂಚಾರಕ್ಕೆ ಸೋಮವಾರ ಚಾಲನೆ ನೀಡಲಾಯಿತು. ವಾಹನವು ಪ್ರತಿ ದಿನ ಒಂದು ತಾಲೂಕಿಗೆ ಸಂಚರಿಸಿ, ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ವರೆಗೆ ಒಂದು ಕಡೆ, ಮಧ್ಯಾಹ್ನ 2.30 ರಿಂದ ಸಂಜೆ 5ರವರೆಗೆ ಮತ್ತೊಂದು ಕಡೆ ಸ್ಥಳದಲ್ಲೇ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಸೇವೆ ನೀಡಲಿದೆ.
    ಜಿಲ್ಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಾರರು ಸೇರಿ 60,230 ಫಲಾನುಭವಿಗಳು ಹೆಸರು ನೋಂದಾಯಿಸಿಕೊಂಡಿದ್ದು ಉಚಿತ ಚಿಕಿತ್ಸೆ ನೀಡಲಾಗಿದೆ.

    ವಾಹನದಲ್ಲಿ ಏನೇನಿದೆ?: ಸಂಚಾರಿ ಆರೋಗ್ಯ ಕ್ಲಿನಿಕ್ ಆತ್ಯಾಧುನಿಕ ಸವಲತ್ತುಗಳನ್ನು ಹೊಂದಿದೆ. ಆಧುನಿಕ ಸ್ಟ್ರೆಚ್ಚರ್, ಬೆಡ್, ಆಕ್ಸಿಜನ್ ಪರಿಕರ, ವ್ಹೀಲ್ ಚೇರ್, ಪ್ರಯೋಗಾಲಯ ಸಲಕರಣೆಗಳೊಂದಿಗೆ ವೈದ್ಯ, ನರ್ಸ್, ಫಾರ್ಮಸಿಸ್ಟ್, ಲ್ಯಾಬ್ ಟೆಕ್ನಿಷಿಯನ್, ಚಾಲಕ ಮತ್ತು ಸಹಾಯಕ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಪ್ರಾಥಮಿಕ ಆರೋಗ್ಯ ಸೇವಾ ಕೇಂದ್ರದ ವ್ಯಾಪ್ತಿಯ ಎಲ್ಲ ಆರೋಗ್ಯ ಸೇವೆಗಳು ಸಂಚಾರಿ ಆರೋಗ್ಯ ಕ್ಲಿನಿಕ್ ಮೂಲಕ ಸಿಗಲಿದೆ.

    ಕಾರ್ಯನಿರ್ವಹಣೆ ಹೇಗೆ?: ಜಿಲ್ಲೆಯಲ್ಲಿ ನೋಂದಾಯಿತ ಮತ್ತು ಅಸಂಘಟಿತ ಕಾರ್ಮಿಕರ ಮಾಹಿತಿ ಸಂಗ್ರಹದ ಜತೆಗೆ ಕಾರ್ಮಿಕ ಸಂಘಟನೆಗಳ ನೆರವಿನೊಂದಿಗೆ ಆಯಾ ಪ್ರದೇಶಗಳಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಅಗತ್ಯ ಮಾತ್ರೆ, ಔಷಧಗಳನ್ನೂ ಉಚಿತವಾಗಿ ನೀಡಲಾಗುತ್ತದೆ. ಕಟ್ಟಡ ಕಾರ್ಮಿಕರು ನೋಂದಾಯಿತ ಕಾರ್ಡ್, ಅಸಂಘಟಿತ ಕಾರ್ಮಿಕರು ಇ-ಶ್ರಮ ಕಾರ್ಡ್, ಕಾರ್ಮಿಕರ ಅವಲಂಬಿತರು ಪಡಿತರ ಚೀಟಿ, ಆಧಾರ್ ಕಾರ್ಡ್ ತೋರಿಸಿ, ಸೇವೆ ಪಡೆಯಬಹುದು ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts