More

    ಕೋವಿಡ್ ರೋಗಿಗಳ ಚಿಕಿತ್ಸೆಗೆ ಹಾಸಿಗೆ ಕಾಯ್ದಿರಿಸಲು ಸೂಚನೆ

    ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚು ಪತ್ತೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ರೋಗಿಗಳ ಚಿಕಿತ್ಸೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.

    ಈ ಸಂಬಂಧ ಆರೋಗ್ಯ ಇಲಾಖೆ ಪ್ರಧಾನ ಕರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದು, ಸೋಂಕು ಲಕ್ಷಣ ಹೊಂದಿರುವವರು ಆಸ್ಪತ್ರೆಗೆ ಬಂದಾಗ ದಾಖಲಿಸಿಕೊಂಡು ಚಿಕಿತ್ಸೆ ನೀಡುವ ಅಗತ್ಯವಿದೆ. ಹಾಗಾಗಿ ಕೋವಿಡ್ ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಗಳನ್ನು ಕಾಯ್ದಿರಿಸುವಂತೆ ತಿಳಿಸಿದ್ದಾರೆ.

    ರಾಜ್ಯ ಸಚಿವ ಸಂಪುಟ ಉಪಸಮಿತಿ (ರಾಜ್ಯ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣ) ಸಭೆ ನಿರ್ದೇಶನದಂತೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಎಚ್ – ಬ್ಲಾಕ್, ಕೆ.ಸಿ.ಜನರಲ್ ಆಸ್ಪತ್ರೆ, ಜಯನಗರ ಸಾರ್ವಜನಿಕ ಆಸ್ಪತ್ರೆ, ಸರ್ ಸಿ.ವಿ.ರಾಮನ್ ಸಾರ್ವಜನಿಕ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯಲ್ಲಿ ಕೋವಿಡ್ ವಾರ್ಡ್‌ಗಳನ್ನು ಕಾಯ್ದಿರಿಸಲು ಸೂಚಿಸಿದ್ದಾರೆ. ಅದೇ ರೀತಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ (ವೈದ್ಯಕೀಯ ಕಾಲೇಜುಗಳು ಸೇರಿದಂತೆ) ಕನಿಷ್ಠ 10 ಸಾಮಾನ್ಯ ಹಾಸಿಗೆಗಳು ಹಾಗೂ ತುರ್ತು ನಿಗಾ ಘಟಕದಲ್ಲಿ 5 (ಐಸಿಯು) ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಕಾಯ್ದಿರಿಸಲು ಸೂಚನೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts