More

    ಹಾಸ್ಟೆಲ್ ಕಟ್ಟಡ ನಿರ್ಮಾಣದೊಂದಿಗೆ ಅಗತ್ಯ ಸೌಲಭ್ಯ ಕಲ್ಪಿಸಿ

    ಮಸ್ಕಿ: ಸರ್ಕಾರ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳ ಶಿಕ್ಷಣ ಮತ್ತು ವಸತಿಗಾಗಿ ಸಾಕಷ್ಟು ಅನುದಾನ ಮಂಜೂರು ಮಾಡುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯ ಕಟ್ಟಡ ನಿರ್ಮಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಸೂಚಿಸಿದರು.

    ಪಟ್ಟಣದ ಕವಿತಾಳ ಸಂಪರ್ಕ ರಸ್ತೆಯಲ್ಲಿ ನಿರ್ಮಿಸಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಉದ್ಘಾಟಿಸಿ ಶನಿವಾರ ಮಾತನಾಡಿದರು. ಸರ್ಕಾರ 5 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ವಸತಿ ನಿಲಯ ಕಟ್ಟಡ ನಿರ್ಮಿಸಿದೆ. ಹಾಸ್ಟೆಲ್ ಪಟ್ಟಣದಿಂದ 5 ಕಿಮೀ. ಅಂತರದಲ್ಲಿರುವುದರಿಂದ ಬಸ್ ಸೌಕರ್ಯ ಕಲ್ಪಿಸಲು ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸುವಂತೆ ತಿಳಿಸಿದರು.

    150 ವಿದ್ಯಾರ್ಥಿಗಳಿಗೆ ಸ್ಥಳಾವಕಾಶವಿರುವ ಹಾಸ್ಟೆಲ್ ಕಟ್ಟಡದಲ್ಲಿ 300 ವಿದ್ಯಾರ್ಥಿಗಳಿದ್ದಾರೆ. ಅಧಿಕಾರಿಗಳು ಎರಡು ವಸತಿ ನಿಲಯ ನಿರ್ಮಾಣಕ್ಕೆ ಮುಂದಾಗಬೇಕಿತ್ತು. ವಸತಿ ನಿಲಯಕ್ಕೆ ಸಂಪರ್ಕಿಸುವ ರಸ್ತೆ ಸರಿ ಇಲ್ಲ. ವಸತಿ ನಿಲಯ ಕಟ್ಟಿದರೆ ಸಾಲದು ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಒದಗಿಸಬೇಕು ಎಂದು ಬೋಸರಾಜು ತಾಕೀತು ಮಾಡಿದರು.

    ಶಾಸಕ ಆರ್.ಬಸನಗೌಡ ತುರ್ವಿಹಾಳ ಮಾತನಾಡಿ ದಲಿತರು, ನಾಯಕ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗಾಗಿ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಜೀವನದಲ್ಲಿ ಉನ್ನತ ಸ್ಥಾನ ಹೊಂದಿ ಉತ್ತಮ ನಾಗರಿಕರಾಗಬೇಕೆಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts