More

    ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಸ್ವಚ್ಛತೆಗೆ ತಾಕೀತು; ಕರ್ತವ್ಯಲೋಪ ಎಸಗಿದವರ ವಿರುದ್ಧ ಶಿಸ್ತು ಕ್ರಮ ಜಿಲ್ಲಾಧಿಕಾರಿ ಎಚ್ಚರಿಕೆ

    ಚಿತ್ರದುರ್ಗ: ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದೇ ಇದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಎಚ್ಚರಿಕೆ ನೀಡಿದರು.

    ಜಿಪಂ ಸಭಾಂಗಣದಲ್ಲಿ ಬಿಸಿಎಂ ಹಾಸ್ಟೆಲ್ ಹಾಗೂ ವಸತಿ ಶಾಲೆಗಳ ಸ್ವಚ್ಛತೆ, ಉತ್ತಮ ಆಹಾರ ತಯಾರಿ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಪ್ರಾಂಶುಪಾಲರು, ಮೇಲ್ವಿಚಾರಕರು ಮತ್ತು ಅಡುಗೆ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.

    ಕಳೆದ 15 ದಿನಗಳಲ್ಲಿ ಜಿಲ್ಲೆಯ ಮೂರು ಹಾಸ್ಟೆಲ್‌ಗಳಲ್ಲಿ ಹಲವು ಮಕ್ಕಳು ಅಸ್ವಸ್ಥರಾಗಿರುವ ಪ್ರಕರಣ ವರದಿಯಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಆತ್ಮತೃಪ್ತಿಗಾಗಿ ಕೆಲಸ ಮಾಡಬೇಕೇ ಹೊರತು ತೋರಿಕೆಗಾಗಿ ಅಲ್ಲ ಎಂದು ನಿರ್ದೇಶನ ನೀಡಿದರು.

    ಹಾಸ್ಟೆಲ್‌ಗಳಿಗೆ ಪೂರೈಕೆ ಆಗುವ ಆಹಾರ ದಾಸ್ತಾನನ್ನು ಸರಿಯಾಗಿ ನಿರ್ವಹಿಸಬೇಕು. ಅವಶ್ಯಕತೆಗೆ ತಕ್ಕಂತೆ ಖರೀದಿಸಬೇಕು. ಅಡುಗೆ ಮನೆ ಸಹಿತ ಹಾಸ್ಟೆಲ್ ಪರಿಸರ ಸ್ವಚ್ಛವಾಗಿರಬೇಕು. ಇದರಿಂದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಸಾಧ್ಯವಿದೆ ಎಂದು ಹೇಳಿದರು.

    ಜಿಪಂ ಸಿಇಒ ಡಾ.ಕೆ.ನಂದಿನಿ ದೇವಿ ಮಾತನಾಡಿ, ಮಲೇರಿಯಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್‌ಗಳಲ್ಲಿ ಸ್ವಚ್ಛತೆ ಕಾಪಾಡುವುದು ಮುಖ್ಯವಾಗಿದೆ. ವಾರ್ಡನ್‌ಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳಂತೆ ಪೋಷಿಸಿ ಅವರಿಗೆ ಶಿಕ್ಷಣ ನೀಡುವುದು ತಮ್ಮ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

    ವಿದ್ಯಾರ್ಥಿಗಳನ್ನು ಅಡುಗೆ ಕೆಲಸಕ್ಕೆ ನಿಯೋಜಿಸುವುದು, ತಂಬಾಕು ಸೇವನೆ, ಧೂಮಪಾನ ಇತ್ಯಾದಿ ವ್ಯಸನಗಳಿಂದ ಸಿಬ್ಬಂದಿ ಮುಕ್ತವಾಗಿರಬೇಕು. ಶುದ್ಧ ನೀರು, ತರಕಾರಿ ಪೂರೈಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಪ್ರತಿ ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕುಂದು-ಕೊರತೆ ಆಲಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts