More

    ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿನಿಯರ ಆಗ್ರಹ

    ರಾಣೆಬೆನ್ನೂರ: ತಾಲೂಕಿನ ಪರಿಶಿಷ್ಟ ಪಂಗಡ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಮೇಲ್ವಿಚಾರಕರ ನೇಮಕ ಮಾಡಬೇಕು. ಮೂಲಭೂತ ಸೌಲಭ್ಯ ಕಲ್ಪಿಸಬೇಕು. ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಜಿಪಂ ಸಿಇಒ ಅಕ್ಷಯ ಶ್ರೀಧರ್ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
    ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬಸವರಾಜ ಮಾತನಾಡಿ, ಹಾಸ್ಟೇಲ್‌ಗೆ ಶೀಘ್ರವಾಗಿ ವಸತಿ ನಿಲಯದ ಮೇಲ್ವಿಚಾರಕರನ್ನು ನೇಮಿಸಬೇಕು. ಗ್ರಂಥಾಲಯ ಹಾಗೂ ಪುಸ್ತಕಗಳನ್ನು ಒದಗಿಸಬೇಕು. ಕಂಪ್ಯೂಟರ್ ಲ್ಯಾಬ್ ಒದಗಿಸಬೇಕು. ಉತ್ತಮ ಗುಣಮಟ್ಟದ ಆಹಾರ ನೀಡಬೇಕು. ವಿದ್ಯಾರ್ಥಿನಿಯರ ಭದ್ರತೆಗಾಗಿ ಹಾಸ್ಟೆಲ್ ಕಟ್ಟಡಕ್ಕೆ ತಡೆಗೋಡೆ ನಿರ್ಮಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
    ವಿದ್ಯಾರ್ಥಿನಿಯರಾದ ಮಲ್ಲಿಗೆ ಆರ್.ಜೆ., ಐಶ್ವರ್ಯ ಹರನಗಿರಿ, ಸುಮಾ ಅಗಸಿಬಾಗಿಲ, ಅಂಬಿಕಾ ಎನ್., ಸಂಗೀತಾ ಲಮಾಣಿ, ಪ್ರತಿಭಾ ಗೊಣೆಪ್ಪನವರ, ಅಶ್ವಿನಿ ಆರ್., ದ್ಯಾಮಾಕ್ಕ ಚವ್ಹಣ್ಣನವರ, ಪ್ರೀಯಾ ಯು.ಟಿ. ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts