More

    ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ
    ಕನಕಗಿರಿ ಆಸ್ಪತ್ರೆಗೆ ದಾಖಲು

    ಕೊಪ್ಪಳ: ಕನಕಗಿರಿ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿನಯದ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸೋಮವಾರ ರಾತ್ರಿಯೇ ಊಟದಲ್ಲಿ ಹುಳು ಕಾಣಿಸಿಕೊಂಡಿದ್ದವೆನ್ನಲಾಗಿದೆ. ಹೀಗಾಗಿ ಕೆಲ ವಿದ್ಯಾರ್ಥಿನಿರು ಊಟ ಬಿಟ್ಟಿದ್ದಾರೆ. ಕೆಲವರು ರಾತ್ರಿಯೇ ವಾಂತಿ ಭೇದಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆಯೂ ಕೆಲ ವಿದ್ಯಾರ್ಥಿಗಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಡುಗೆ ಅಸ್ವಚ್ಛತಡಯಿಂದ ಕೂಡಿದ್ದು ಸಮಸ್ಯೆಗೆ ಕಾರಣ ಎನ್ನಲಾಗಿದಡ. ವಿಷಯ ತಿಳಿದು ಪಾಲಕರು ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ಧಾವಿಸಿದ್ದು ಅಡಿಗೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ಕೊಪ್ಪಳ ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts