

ನವದೆಹಲಿ: ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿ ನರ್ಸಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರನ್ನು ಹಾಸ್ಟೆಲ್ ವಾರ್ಡನ್ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಆರೋಪಿ ಮಹಿಳಾ ವಾರ್ಡನ್ನನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ಒಬ್ಬರು LNJP ಸರ್ಕಾರಿ ಆಸ್ಪತ್ರೆಯ ಅಹಲ್ಯಾಭಾಯಿ ಕಾಲೇಜ್ ಆಪ್ ನರ್ಸಿಂಗ್ನಲ್ಲಿ ಮಂಗಳವಾರ ತಡರಾತ್ರಿ ಘಟನೆ ನಡೆದಿದೆ.
ಅಂತಿಮ ವರ್ಷ ಬಿಎಸ್ಸಿ ಪದವಿ ವ್ಯಾಸಂಗ ಮಾಡುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿಯರು ಹಾಸ್ಟೆಲ್ ವಾರ್ಡನ್ ಹಾಗೂ ಸಹಪಾಠಿಗಳೊಂದಿಗೆ ದೆಹಲಿಯ ಮಂಡಿ ಪ್ರದೇಶದಲ್ಲಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು.
ಈ ವೇಳೆ ಹಾಸ್ಟೆಲ್ ವಾರ್ಡನ್ ತನ್ನ ಬ್ಯಾಗಿನಲ್ಲಿದ್ದ 8,000 ಸಾವಿರ ರೂಪಾಯಿ ಕಾಣೆಯಾಗಿರುವ ಕುರಿತು ಹೇಳಿದ್ದಾರೆ ಮತ್ತು ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ ಮೇಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಹಾಸ್ಟೆಲ್ಗೆ ಬಂದ ನಂತರ ಸಹಪಾಠಿಗಳ ಸಹಾಯದೊಂದಿಗೆ ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಹಾಸ್ಟೆಲ್ ವಾರ್ಡನ್ ದುಡ್ಡು ಙತ್ತೆಯಾಗದ ಕಾರಣ ಬಿಟ್ಟು ಕಳುಹಿಸಿದ್ದಾರೆ.
ತಮ್ಮಗೆ ಈಗಾದ ಕುರಿತು ಸಂತ್ರಸ್ತ ವಿದ್ಯಾರ್ಥಿನಿಯರು ಪೋಷಕರ ಬಳಿ ಅಳಲು ತೋಡಿಕೊಂಡಿದ್ದು ಈ ಬಗ್ಗೆ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳ ತಂಡ ವಿದ್ಯಾರ್ಥಿನಿಯರ ಹೇಳಿಕೆಯನ್ನು ಪಡೆದು ಅವರನ್ನು ರಕ್ಷಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ ಆರೋಪಿ ಮಹಿಳಾ ವಾರ್ಡನ್ ಹಾಗೂ ಕೃತ್ಯಕ್ಕೆ ಸಹಕರಿಸಿದವರ ವಿರುದ್ಧ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಭಾರತ ದಂಡ ಸಂಹಿತೆ(IPC Section) 354 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತಿರುವ ಅಹಲ್ಯಾಭಾಯಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲರ ನೇತೃತ್ವದಲ್ಲಿ ಸಮಿತಿ ಒಂದನ್ನು ರಚಿಸಿದ್ದು ಆರೋಪಿ ಮಹಿಳಾ ವಾರ್ಡನ್ ಹಾಗೂ ಜೃತ್ಯಕ್ಕೆ ಸಹಕರಿಸಿದ ವಿದ್ಯಾರ್ಥಿನಿಯರನ್ನು ಅಮಾನತತ್ತಿನಲ್ಲಿರಿಸಲಾಗಿದೆ.