More

    ಹಾಸ್ಟೆಲ್‌ಗಳೂ ಕೋವಿಡ್ ಸೆಂಟರ್

    ಬೆಳಗಾವಿ: ರಾಜ್ಯದಲ್ಲಿ ಕರೊನಾ ಸೋಂಕಿತರ ಮತ್ತು ಮೃತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ವಸತಿ ನಿಲಯಗಳನ್ನು ‘ಕೋವಿಡ್ ಕೇರ್’ ಕೇಂದ್ರಗಳನ್ನಾಗಿಸಲು ಮುಂದಾಗಿದೆ. ಆ ನಿಟ್ಟಿನಲ್ಲಿ ಸಿದ್ಧತೆ ಪರಿಶೀಲನೆ ನಡೆದಿದೆ.

    ಜಿಲ್ಲೆಯಲ್ಲಿ ನಾಲ್ಕೈದು ದಿನಗಳ ಅವಧಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಈಗಾಗಲೇ ಸೋಕಿತರ ಸಂಖ್ಯೆ 696ಕ್ಕೆ ಏರಿದ್ದು, 17 ಜನರು ಮೃತಪಟ್ಟಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು, ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವ್ಯಾಪ್ತಿಯ 246 ವಸತಿ ನಿಲಯ ಮತ್ತು 36 ವಸತಿ ಶಾಲೆಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನಾಗಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

    ರಾಜ್ಯದಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ವಿವಿಧ ರಾಜ್ಯಗಳಿಂದ ಮತ್ತು ವಿವಿಧ ಮಹಾನಗರ ಕಡೆಗಳಿಂದ ಜಿಲ್ಲೆಗೆ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲು ಬಳಸಲಾಗಿದ್ದ ವಸತಿ ನಿಲಯ ಕೇಂದ್ರಗಳನ್ನು ಇದೀಗ ಕೋವಿಡ್ ಕೇರ್ ಕೇಂದ್ರಗಳನ್ನಾಗಿ ಮಾಡಲು ಮತ್ತು ತಾಲೂಕು ಕೇಂದ್ರದ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ 1000ಕ್ಕೂ ಅಧಿಕ ಹಾಸಿಗೆಗಳು ಲಭ್ಯವಾಗುವಂತೆ ವ್ಯವಸ್ಥೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕ್ರಮ ಕೈಗೊಂಡಿದೆ. ಈಗಾಗಲೇ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಹತ್ತು ತಾಲೂಕುಗಳ ಜನರಲ್ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲು

    ಈಗಾಗಲೇ ಬೆಳಗಾವಿ ಮಹಾನಗರ ಸೇರಿ 14 ತಾಲೂಕುಗಳ ವ್ಯಾಪ್ತಿಯಲ್ಲಿ ಏಪ್ರಿಲ್‌ನಿಂದ ಜೂನ್ ತಿಂಗಳ ಅವಧಿಯಲ್ಲಿ ಹೊರಗಿನಿಂದ ಜಿಲ್ಲೆಗೆ ಬರುತ್ತಿರುವವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲು 80 ವಸತಿ ನಿಲಯ ಮತ್ತು 132ಕ್ಕೂ ಅಧಿಕ ಲಾಡ್ಜ್‌ಗಳನ್ನು ಬಳಕೆ ಮಾಡಿಕೊಳ್ಳಲಾಗಿತ್ತು. ಈ ವೇಳೆ ಸೋಂಕಿನ ಲಕ್ಷಣಗಳು ಕಂಡುಬರುವವರಿಗೆ ಬಿಮ್ಸ್ ಆವರಣದಲ್ಲಿ ನಿರ್ಮಿಸಿರುವ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇದೀಗ ಸೋಂಕಿತರ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹತ್ತು ತಾಲೂಕುಗಳಲ್ಲಿರುವ ಜನರಲ್ ಆಸ್ಪತ್ರೆಯಲ್ಲಿ ತಲಾ 30 ಹಾಸಿಗೆ ಸೌಲಭ್ಯ ಹಾಗೂ ಪ್ರತಿ ತಾಲೂಕಿನಲ್ಲಿ ಎರಡು ವಸತಿ ನಿಲಯಗಳನ್ನು ಕೋವಿಡ್-19ಕೇರ್ ಕೇಂದ್ರಗಳನ್ನಾಗಿ ಮಾಡಲಾಗುತ್ತಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ. ಎಸ್.ವಿ. ಮುನ್ಯಾಳ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಮೂರು ಹಂತದ ಕೋವಿಡ್-19 ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ಸರ್ಕಾರಿ ವಸತಿ ನಿಲಯಗಳಲ್ಲಿ ಕರೊನಾ ಲಕ್ಷಣಗಳು ಕಂಡುಬಂದವರನ್ನು ಇಡಲಾಗುತ್ತಿದೆ. ಸೋಂಕಿತರನ್ನು ಕೋವಿಡ್ ಆರೋಗ್ಯ ಕೇಂದ್ರಗಳಿಗೆ ಹಾಗೂ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರನ್ನು ಬಿಮ್ಸ್‌ಗೆ ಕಳುಹಿಸಲಾಗಿದೆ.
    | ಡಾ. ಕೆ.ವಿ. ರಾಜೇಂದ್ರ, ಜಿಪಂ ಸಿಇಒ, ಬೆಳಗಾವಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts