ಹೊಸೂರಲ್ಲಿ ಎಲ್‌ಕೆಜಿ ಪ್ರಾರಂಭೋತ್ಸವ

ಹೊಸೂರು: ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20ನೇ ಸಾಲಿನ ಆಂಗ್ಲ ಮಾಧ್ಯಮ ತರಗತಿ (ಎಲ್‌ಕೆಜಿ)ಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ವೀಣಾ ಕೀರ್ತಿ ಬುಧವಾರ ಚಾಲನೆ ನೀಡಿದರು.

ಪ್ರಸ್ತುತ ಖಾಸಗಿ ಶಾಲೆಗಳ ಹಾವಳಿಯಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಪಾಲಕರ ಇಂಗ್ಲಿಷ್ ವ್ಯಾಮೋಹವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಹೀಗಾಗಿ ಸರ್ಕಾರ ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ ಆರಂಭಿಸಿದ್ದು, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಕ್ಷೇತ್ರಶಿಕ್ಷಣಾಧಿಕಾರಿ ರಾಜು ಮಾತನಾಡಿ, ಪ್ರತಿ ಕ್ಲಸ್ಟರ್‌ನಲ್ಲೂ ಎಲ್ಕೆಜಿ ಪ್ರಾರಂಭಿಸಲಾಗುತ್ತಿದ್ದು, 30 ಮಕ್ಕಳ ದಾಖಲಾತಿಗೆ ಅವಕಾಶವಿದೆ. ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸಬೇಕು. ಶಿಕ್ಷಕರು ಮಕ್ಕಳ ಕಲಿಕೆ ಬಗ್ಗೆ ಚರ್ಚಿಸಲು ತಿಂಗಳಿಗೊಮ್ಮೆ ಪಾಲಕರ ಸಭೆ ನಡೆಸಬೇಕು ಎಂದು ಹೇಳಿದರು.

ಕ್ಷೇತ್ರಸಂಪನ್ಮೂಲ ಸಮನ್ವಯಾಧಿಕಾರಿ ರುದ್ರಪ್ಪ , ಹಳಿಯೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಸಿಆರ್‌ಪಿ ಪ್ರಕಾಶ್, ಭಾರತ ಮಾತಾ ಸೇವಾ ಟ್ರಸ್ಟ್‌ನ ನವೀನ, ಎಸ್‌ಡಿಎಂಸಿ ಅಧ್ಯಕ್ಷ ಆನಂದ್ , ಮುಖ್ಯ ಶಿಕ್ಷಕಿ ಜಯಲಕ್ಷ್ಮೀ, ಸಹ ಶಿಕ್ಷಕರಾದ ರೋಹಿತ್ ನಾಯಕ್, ಶಿವಮೂರ್ತಿ ಹಾಗೂ ಧರ್ಮ ಇತರರು ಇದ್ದರು.

Leave a Reply

Your email address will not be published. Required fields are marked *