More

    ರಾಜ್ಯದಲ್ಲಿ ಬಿಸಿಗಾಳಿ ಆತಂಕ; ಬಿಸಿಲಿನ ಝಳಕ್ಕೆ ಸುಸ್ತಾದ ಜನ

    ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸತೊಡಗಿದೆ. ಕಳೆದ ವಾರ ಸಂಭವಿಸಿದ್ದ ಚಂಡಮಾರುತವು ತೇವಾಂಶ ಭರಿತ ಮೋಡಗಳ ಸೆಳೆತ, ಗಾಳಿ ವೇಗ ಇಲ್ಲದಿರುವುದು ಹಾಗೂ ವಾತಾವರಣದಲ್ಲಿ ತೀವ್ರ ತೇವಾಂಶ ಕೊರತೆಯಿಂದಾಗಿ ಬಿಸಿಲಿನ ಝಳ ಜತೆಗೆ ಬಿಸಿಗಾಳಿ ಆತಂಕ ಎದುರಾಗಿದೆ. ಇದರಿಂದಾಗಿ ಬಿಸಿಲು ಧಗೆಯಿಂದ ಜನರಿಗೆ ಹೆಚ್ಚು ಝಳ ಕಾಣಿಸಿಕೊಳ್ಳುತ್ತಿದೆ.

    ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಕೇರಳ, ತೆಲಂಗಾಣ, ಗೋವಾ ಹಾಗೂ ತಮಿಳುನಾಡು ಸೇರಿ ದೇಶದ ಹಲವು ರಾಜ್ಯಗಳಲ್ಲಿ ತಾಪಮಾನ ಹೆಚ್ಚಳ ಬಗ್ಗೆ ಈಗಾಗಲೇ ಭಾರತೀಯ ಹವಾಮಾನ ಇಲಾಖೆ( ಐಎಂಡಿ) ಎಚ್ಚರಿಕೆ ನೀಡಿದ್ದು, ಕರ್ನಾಟಕದಲ್ಲೂ ಉಷ್ಣಾಂಶ ಏರಿಕೆಯಾಗಿದೆ. ಬಳ್ಳಾರಿ, ರಾಯಚೂರು, ಕಲಬುರಗಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಗುರುವಾರ ಉಷ್ಣಾಂಶ 40ರ ಗಡಿ ಮುಟ್ಟಿದೆ.

    ಇದನ್ನೂ ಓದಿ:  ಅಸಭ್ಯ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಪ್ರವೇಶ ನಿಷಿದ್ಧ

    ಮೂರು ದಿನ ಮಳೆ: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಬೆಂ.ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಾಮರಾಜನಗರ, ತುಮಕೂರು, ಕೋಲಾರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಮೇ 19 ಮತ್ತು ಮೇ 20ರಂದು ವ್ಯಾಪಕವಾಗಿ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಸಾಧಾರಣವಾಗಿ ಮಳೆ ಬೀಳಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಅಸಭ್ಯ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಪ್ರವೇಶ ನಿಷಿದ್ಧ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts