More

    ಪ್ರಯಾಣಿಕರ ತಂಗುದಾಣವಾಯ್ತು ಹೋಟೆಲ್!

    ವಿಜಯವಾಣಿ ಸುದ್ದಿಜಾಲ ನೆಲಮಂಗಲ
    ಸಾರ್ವಜನಿಕ ಬಸ್ ನಿಲ್ದಾಣದ ಬಳಿಯ ಪ್ರಯಾಣಿಕರ ತಂಗುದಾಣದಲ್ಲಿ ವ್ಯಕ್ತಿಯೊಬ್ಬ ಅನಧಿಕೃತವಾಗಿ ಹೋಟೆಲ್ (ಕ್ಯಾಂಟೀನ್) ನಡೆಸುತ್ತಿದ್ದರೂ ಕ್ರಮ ಕೈಗೊಳ್ಳಬೇಕಾದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.
    ತಾಲೂಕಿನ ಪ್ರತಿಷ್ಠಿತ ಪಂಚಾಯಿತಿಗಳ ಪೈಕಿ ಯಂಟಗಾನಹಳ್ಳಿ ಗ್ರಾಪಂ ಕೂಡ ಒಂದಾಗಿದೆ. ಈ ಪಂಚಾಯಿತಿಯ ಬಾವಿಕೆರೆ ಹಾಗೂ ಮಲ್ಲಬಾಣವಾಡಿ ಗ್ರಾಮಗಳ ಗಡಿ ಪ್ರದೇಶದಲ್ಲಿ ಶ್ರೀನಿವಾಸಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ರಾ.ಹೆದ್ದಾರಿ 75ರ ಬಳಿ ಅಂದಿನ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರ ವಿಶೇಷ ಅನುದಾನದಲ್ಲಿ 5 ವರ್ಷಗಳ ಹಿಂದೆ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣದ ಬಳಿ ತಂಗುದಾಣ ನಿರ್ಮಾಣ ಮಾಡಲಾಗಿದೆ. ಆದರೆ, ಈ ತಂಗುದಾಣದಲ್ಲಿ 2 ವರ್ಷದಿಂದ ವ್ಯಕ್ತಿಯೊಬ್ಬ ಅನಧಿಕೃತವಾಗಿ ಹೋಟೆಲ್ ನಡೆಸುತ್ತಿದ್ದು, ಸಂಬಂಧಪಟ್ಟ ಗ್ರಾಪಂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಕ್ರಮ ಕೈಗೊಳ್ಳದೇ ಜಾಣ ಮೌನ ವಹಿಸಿರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
    ಅನಧಿಕೃತ ವಿದ್ಯುತ್ ಪೂರೈಕೆ: ಹೋಟೆಲ್ ನಡೆಸಲು ಗ್ರಾಪಂನಿಂದ ಅನುಮತಿ ಪಡೆಯುವುದು ಕಡ್ಡಾಯ. ಆದರೆ ಖಾಸಗಿ ವ್ಯಕ್ತಿ, ಕೆಲ ಮುಖಂಡರ ಬೆಂಬಲದಿಂದ ತಂಗುದಾಣದಲ್ಲಿ ಹೋಟೆಲ್ ಮಾಡಿಕೊಂಡಿದ್ದು, ಹೋಟೆಲ್ ಸಮೀಪ ವಿದ್ಯುತ್ ಕಂಬದಿಂದ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ನಡೆ ಚರ್ಚೆಗೆ ಗ್ರಾಸವಾಗಿದೆ.

    ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ನಿಲ್ದಾಣ ಬಳಿ ತಂಗುದಾಣ ನಿರ್ಮಾಣ ಮಾಡಿದ್ದು, ವ್ಯಕ್ತಿಯೊಬ್ಬ ಹೋಟೆಲ್ ನಡೆಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಯಾವುದೇ ಪರವಾನಗಿ ಇಲ್ಲದೆ ಅನಧಿಕೃತವಾಗಿ ಹೋಟೆಲ್ ನಡೆಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಬೇಸರದ ಸಂಗತಿ. ಕೂಡಲೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಹೋಟೆಲ್ ತೆರವು ಕಾರ್ಯಕ್ಕೆ ಮುಂದಾಗಬೇಕು.
    ಮಂಜುನಾಥ್
    ಸ್ಥಳೀಯ ನಿವಾಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts