More

    ಸಾರಿಗೆ ನೌಕರರಿಂದ ಅಹೋರಾತ್ರಿ ಧರಣಿ

    ಹುಬ್ಬಳ್ಳಿ : ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ತುರ್ತಾಗಿ ಈಡೇರಿಸಲು ಕ್ರಮ ಕೈಗೊಳ್ಳದಿದ್ದರೆ ಮಾ. 4ರಂದು ಬೆಂಗಳೂರಿನಲ್ಲಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಸ್​ಸಿ, ಎಸ್​ಟಿ ಕ್ಷೇಮಾಭಿವೃದ್ಧಿ ಸಂಘದ ವಾಯವ್ಯ ವಿಭಾಗದ ಅಧ್ಯಕ್ಷ ಡಿ. ಪ್ರಸಾದ ಹೇಳಿದರು.

    ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮುಷ್ಕರದಲ್ಲಿ ಕಾರ್ವಿುಕರ ವಿರುದ್ಧ ಕೈಗೊಂಡ ಎಲ್ಲ ಶಿಸ್ತಿನ ಕ್ರಮಗಳನ್ನು ರದ್ದುಗೊಳಿಸಬೇಕು ಹಾಗೂ ಈ ಹಿಂದಿನ ಕರ್ತವ್ಯ ಸ್ಥಳದಲ್ಲಿ ಅವರನ್ನು ಮರಳಿ ನಿಯೋಜಿಸಬೇಕು. 2020ರ ಜ. 1 ರಿಂದ ಅನ್ವಯವಾಗುವಂತೆ ನಾಲ್ಕೂ ಸಾರಿಗೆ ನಿಗಮಗಳ ಸಿಬ್ಬಂದಿಯ ವೇತನ ಬಾಕಿಯನ್ನು ಒಂದೇ ಕಂತಿನಲ್ಲಿ ಪಾವತಿಸಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

    ಸಾರಿಗೆ ನೌಕರರು, ಅವರ ಕುಟುಂಬದವರು ಹಾಗೂ ನಿವೃತ್ತ ನೌಕರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

    ಶ್ರೀಶೈಲಗೌಡ ಕಮತರ, ಎ.ಎಸ್. ಶಿಂಧೆ, ಎಲ್. ಮನಮೋಹನ ಸುದ್ದಿಗೋಷ್ಠಿಯಲ್ಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts