More

    ಗೃಹಬಂಧನದಲ್ಲಿ ಇದ್ದವವರು ಹೊರ ಬಂದರೆ ಜೈಲಿಗೆ, ಬಳ್ಳಾರಿ ಡಿಸಿ ಎಸ್.ಎಸ್‌ನಕುಲ್ ಎಚ್ಚರಿಕೆ

    ಬಳ್ಳಾರಿ: ಹೊರದೇಶಗಳಿಗೆ ಹೋಗಿ ಜಿಲ್ಲೆಗೆ ಮರಳಿ ಬಂದವರು ತಕ್ಷಣವೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಇಲ್ಲವೇ ಜಿಲ್ಲಾಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಂಡು 14 ದಿನ ಗೃಹಬಂಧನದಲ್ಲಿರಬೇಕು. ನಿಗಾ ವೇಳೆಯೂ ಹೊರಗಡೆ ತಿರುಗಾಡಿದ್ದು ಕಂಡುಬಂದಲ್ಲಿ ಅಂಥವರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಎಚ್ಚರಿಕೆ ನೀಡಿದ್ದಾರೆ.

    ಡಿಸಿ ಕಚೇರಿ ಸಭಾಂಗಣದಲ್ಲಿ ಕರೊನಾಗೆ ಸಂಬಂಧಿಸಿದಂತೆ ಎನ್‌ಜಿಒಗಳಿಗೆ ಗುರುವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಬಂಧನದಲ್ಲಿದ್ದವರು ಬೇಜವಾಬ್ದಾರಿಯಿಂದ ವರ್ತಿಸಬಾರದು. ನಮ್ಮಿಂದ ಇನ್ನೊಬ್ಬರಿಗೆ ಸಮಸ್ಯೆಯಾಗುತ್ತದೆ ಎಂಬುದನ್ನು ಅರಿಯಬೇಕು. ಮರೆತರೆ ಜಿಲ್ಲಾಡಳಿತ ಕ್ರಮಕೈಗೊಳ್ಳುವುದು ನಿಶ್ಚಿತ. ಇದಲ್ಲದೆ ಕರೊನಾ ವೈರಸ್‌ಗೆ ಔಷಧವಿದೆ ಸೇರಿ ಇತರ ಸುಳ್ಳು ಸುದ್ದಿಗಳನ್ನು ವಾಟ್ಸ್ ಆ್ಯಪ್‌ಗಳಲ್ಲಿ ಹರಿಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಯಾರಾದರೂ ಹರಬಿಟ್ಟಿದ್ದು ತಿಳಿಸಿದಲ್ಲಿ ಅಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಜಿಲ್ಲೆಯ ಎನ್‌ಜಿಒಗಳು ಸ್ವಯಂ ಸೇವಕರ ಪಟ್ಟಿ ಸಿದ್ಧಪಡಿಸಬೇಕು. ಅಗತ್ಯಬಿದ್ದಾಗ ಸೇವೆಗೆ ಸಿದ್ಧರಿರಬೇಕು. ಕರಪತ್ರಗಳನ್ನು ಮುದ್ರಿಸಿ ವಿತರಿಸುವ ಕೆಲಸ ಮಾಡಬೇಕು. ಜಿಲ್ಲಾಸ್ಪತ್ರೆ ಮತ್ತು ವಿಮ್ಸ್ನಲ್ಲಿ ಅವಶ್ಯಕ ಮತ್ತು ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದ ಸೇವೆಗಳನ್ನು ಕಲ್ಪಿಸುವುದನ್ನು ಮುಂದೂಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಮಾಹಿತಿ ನೀಡಿದರು. ಎಸ್ಪಿ ಸಿ.ಕೆ.ಬಾಬಾ, ಸಿಇಒ ಕೆ.ನಿತೀಶ್, ಡಿಎಚ್‌ಒ ಡಾ.ಜನಾರ್ದನ್, ಜಿಲ್ಲಾ ಶಸ್ತ್ರಚಿಕಿತ್ಸಕ ಬಸರೆಡ್ಡಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಎನ್‌ಜಿಒಗಳ ಪ್ರತಿನಿಧಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts