ಮನೆಯಿಂದ ನಗದು, ಆಭರಣ ಕಳವು

theft
Published on

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳ ನುಗ್ಗಿ ನಗದು ಸಹಿತ ಚಿನ್ನಾಭರಣ ಕಳವು ಮಾಡಿದ ಘಟನೆ ಬಿ.ಮೂಡ ಗ್ರಾಮದ ಕಾರಂತ ಕೋಡಿ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಶ್ರೀಧರ ಎಂಬುವರ ಮನೆಯಲ್ಲಿ ಈ ಕಳವು ನಡೆದಿದ್ದು, 30 ಸಾವಿರ ನಗದು 20 ಸಾವಿರ ಮೌಲ್ಯದ ಚಿನ್ನಾಭರಣ, 2 ಸಾವಿರ ರೂ. ಮೌಲ್ಯದ ಬೆಳ್ಳಿಯ ಆಭರಣ ಕಳವಾಗಿದೆ. ಶ್ರೀಧರ ಅವರು ಸೋಮವಾರ ಸಂಜೆಯಷ್ಟೇ ಮಗಳ ಮನೆಗೆ ತೆರಳಿದ್ದು, ಮಂಗಳವಾರ ಮನೆಯ ಬಾಗಿಲು ಮುರಿದಿರುವ ಬಗ್ಗೆ ಮಾಹಿತಿ ದೊರೆತಿದೆ. ಕೂಡಲೇ ಶ್ರೀಧರ ಅವರು ಮನೆಗೆ ತೆರಳಿ ಪರಿಶೀಲಿಸಿದ್ದು, ಮೊದಲಿಗೆ ಮನೆ ಮುಂದೆ ಹಾರೆ ಪತ್ತೆಯಾಗಿದೆ. ಮನೆಯ ಬಾಗಿಲಿನ ಬೀಗ ತೆಗೆದು ಒಳಗೆ ಹೋದಾಗ ಕಪಾಟಿನಲ್ಲಿದ್ದ ಬಟ್ಟೆ ಚೆಲ್ಲಾಪಿಲ್ಲಿಯಾಗಿದ್ದು, ಜತೆಗಿಟ್ಟಿದ್ದ ಹಣ ಹಾಗೂ ಚಿನ್ನಾಭರಣ ಕಳವಾಗಿರುವುದು ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net