

ಮೈಸೂರು: ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿಯೊಬ್ಬರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹನುಮನಹಾಳು ಗ್ರಾಮದಲ್ಲಿ ನಡೆದಿದೆ.
ಮನುರಾಣಿ(24) ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರೂ. ಪತಿ ಮಂಜು ವಿರುದ್ಧ ಮೃತ ಮಹಿಳೆಯ ಕುಟುಂಬಸ್ಥರು ಬನ್ನೂರು ಪೊಲೀಸ್ ಠಾಣೆಯಲ್ಲಿ ಕೊಲೆ ಆರೋಪದಡಿ ದೂರು ದಾಖಲಿಸಿದ್ದಾರೆ.
ಮನುರಾಣಿ ಮಂಜು ದಂಪತಿಗೆ ಅನೇಕ ವರ್ಷಗಳ ಹಿಂದೆ ಮದುವೆಯಾಗಿ ಇಬ್ಬರೂ ಮಕ್ಕಳಿದ್ದಾರೆ. ಅದೇ ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಮಂಜು ಅನೈತಿಕ ಸಂಬಂಧವನ್ನೂ ಹೊಂದಿದ್ದ. ಈ ವಿಚಾರವಾಗಿ ದಂಪತಿಗಳ ನಡುವೆ ಗಲಾಟೆಯಾಗುತ್ತಿತ್ತು. ಒಮ್ಮೆ ಗ್ರಾಮಸ್ಥರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಯೂ ಸಹ ನಡೆದಿತ್ತು.
ರಾಜಿ ಪಂಚಾಯಿತಿ ಬಳಿಕ ಸುಮ್ಮನಾಗದ ಮಂಜು ಮಹಿಳೆಯೊಂದಿಗೆ ತನ್ನ ಅನೈತಿಕ ಸಂಬಂಧವನ್ನೂ ಮುಂದುವರೆಸಿದ್ದ. ಇದನ್ನೂ ಪ್ರಶ್ನಿಸಿದ್ದಕ್ಕೆ ಮನುರಾಣಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಇದರಿಂದ ಬೇಸತ್ತಿದ್ದ ಮನುರಾಣಿ ಭಾನುವಾರ ಸಂಜೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನುರಾಣಿ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯನ್ನೂ ಹೊಂದಿಲ್ಲ. ಆಕೆಗೆ ಬಲವಂತವಾಗಿ ವಿಷಕುಡಿಸಿ ಹತ್ಯೆ ಮಾಡಲಾಗಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರೂ ಆರೋಪಿಸಿದ್ದಾರೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಮಹಿಳೆಯ ಪತಿ ವಿರುದ್ಧ ಕೊಲೆ ಆರೋಪದಡಿ ದೂರು ದಾಖಲಿಸಲಾಗಿದೆ.