ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಸೂರು: ಉದಯಗಿರಿಯ ಶಾಂತಿನಗರದ ನಿವಾಸದಲ್ಲಿ ಶುಕ್ರವಾರ ವರದಕ್ಷಿಣೆ ಕಿರುಕುಳಕ್ಕೆ ನೊಂದ ಗೃಹಿಣಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಾಂತಿನಗರದ ಶಾಜೀಯಾ ಬಾನು (23)ಮೃತ ದುರ್ದೈವಿ. ಒಂದೂವರೆ ವರ್ಷದ ಹಿಂದೆ ಮಹಮದ್ ಸಲ್ಮಾನ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ನಂತರ ಪತಿ, ಅತ್ತೆ, ಅತ್ತೆಯ ತಂಗಿ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಶುಕ್ರವಾರ ರಾತ್ರಿ ಮನೆಯ ಕೋಣೆಯಲ್ಲಿ ವೇಲ್‌ನಿಂದ ನೇಣು ಹಾಕಿಕೊಂಡಿದ್ದಾರೆ. ಕೆಲ ನಿಮಿಷಗಳ ನಂತರ ಪತಿ ಬಂದು ನೋಡಿ ನೇತಾಡುತ್ತಿದ್ದ ದೇಹವನ್ನು ಕೆಳಗಿಸಿ, ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.