ವರ್ಷದ ಹಿಂದೆ ಮದುವೆಯಾಗಿದ್ದ ಯುವತಿ ಸಾವಿಗೆ ಶರಣು

suicide
Published on

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನಲೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ತೇಜಸ್ವಿನಿ(28) ಎಂದು ಗುರುತಿಸಲಾಗಿದ್ದು, ಚಿಕ್ಕಬಳ್ಳಾಪುರದ ಕಾರ್ಖಾನ್​ಪೇಟೆಯಲ್ಲಿ ಪತಿ ಲೋಹಿತ್​ ಜೊತೆ ವಾಸವಿದ್ದರು.

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಮೂಲದ ತೇಜಸ್ವಿನಿ 2022ರಲ್ಲಿ ಚಿಕ್ಕಬಳ್ಳಾಪುರದ ಲೋಹಿತ್​ ಎಂಬುವವರನ್ನು ವಿವಾಹವಾಗಿದ್ದರು. ಮನೆಯಲ್ಲಿ ಯಾರು ಇಲ್ಲದೆ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ.

ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ಧಾರೆ.

suicide
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net