20.4 C
Bengaluru
Sunday, January 19, 2020

ವಸತಿ ನಿಲಯ ಭಯದ ಆಲಯ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

|ಸುಧೀರ ಕಳ್ಳೆ, ರಾಯಬಾಗ

ಕೆಪಿಟಿಸಿಎಲ್ ನೌಕರರು ವಾಸಿಸುವ ವಸತಿ ನಿಲಯಗಳು ಸರಿಯಾದ ನಿರ್ವಹಣೆಯಿಲ್ಲದೆ, ಹಾಳು ಕೊಂಪೆಯಾಗಿವೆ. ಗಿಡ-ಗಂಟಿಗಳು ಬೆಳೆದಿದ್ದು, ವಾಸಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಹೆಸ್ಕಾಂ ಕಚೇರಿ ಆವರಣದಲ್ಲಿ ಕೆಪಿಟಿಸಿಎಲ್ ವತಿಯಿಂದ ಸಿಬ್ಬಂದಿಗಾಗಿ 40 ವರ್ಷದ ಹಿಂದೆ ನಿರ್ಮಿಸಿದ್ದ 19 ವಸತಿ ನಿಲಯಗಳಲ್ಲಿ ಬಹುತೇಕ ಮನೆಗಳು ವಾಸಕ್ಕೆ ಯೋಗ್ಯವಿಲ್ಲದಂತಿವೆ.

ಅಲ್ಪ ಸ್ವಲ್ಪ ವ್ಯವಸ್ಥಿತವಾಗಿರುವ ಮನೆಗಳಲ್ಲಿ ಈಗ 8 ಕುಟುಂಬಗಳು ನೆಲೆಸಿದ್ದು, ಇನ್ನುಳಿದ ಮನೆಗಳ ಗೋಡೆ ಬಿರುಕು ಬಿಟ್ಟಿವೆ. ಛಾವಣಿ ಸೋರುತ್ತಿವೆ. ವಸತಿ ನಿಲಯಗಳ ಮನೆಗಳ ಸುತ್ತಮುತ್ತ ಗಿಡ-ಗಂಟಿ ಬೆಳೆದಿದ್ದರಿಂದ ವಿಷಜಂತುಗಳ ತಾಣವಾಗಿ ಪರಿಣಮಿಸಿದೆ. ಸಿಬ್ಬಂದಿ ಕುಟುಂಬಗಳು ಜೀವ ಭಯದಿಂದಲೇ ವಾಸ ಮಾಡುವಂತಾಗಿದೆ.

ಕುಸಿದ ರಕ್ಷಣಾ ಗೋಡೆ: ಕೆಪಿಟಿಸಿಎಲ್ ಸಿಬ್ಬಂದಿಗಾಗಿ ನಿರ್ಮಿಸಿರುವ ವಸತಿ ನಿಲಯಗಳ ಸುತ್ತಮುತ್ತಲಿನ ಕಾಂಪೌಂಡ್ ಅಲ್ಲಲ್ಲಿ ಕುಸಿದು ಬಿದಿದ್ದೆ. ಇದರಿಂದ ರಾತ್ರಿ ಹೊತ್ತು ಕಳ್ಳಕಾಕರ ಭಯ ಒಂದೆಡೆಯಾದರೆ, ಇನ್ನೊಂದೆಡೆ ಹಗಲಿನಲ್ಲಿ ದನ- ಕರುಗಳ ಕಾಟದಿಂದ ವಸತಿ ನಿಲಯದಲ್ಲಿರುವ ನೌಕರರ ಕುಟುಂಬಸ್ಥರು ಬೇಸತ್ತಿದ್ದಾರೆ.

ಮುಖ್ಯ ದ್ವಾರದಲ್ಲಿ ಗೇಟ್ ಇಲ್ಲದಿರುವುದರಿಂದ ಹೆಸ್ಕಾಂನ ಬೆಲೆ ಬಾಳುವ ಸಾಮಗ್ರಿಗಳಿಗೂ ಕೂಡ ರಕ್ಷಣೆ ಇಲ್ಲದಂತಾಗಿದೆ.
ಕೆಪಿಟಿಸಿಎಲ್ ಮೇಲಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಹೆಸ್ಕಾಂ ಕಚೇರಿಗೆ ಮತ್ತು ವಸತಿ ನಿಲಯಕ್ಕೆ ರಕ್ಷಣಾ ಗೋಡೆ ನಿರ್ಮಿಸಲು ಮುಂದಾಗಬೇಕಿದೆ. ಹಳೇ ವಸತಿ ನಿಲಯ ತೆರವು ಮಾಡಿ, ವಾಸಕ್ಕೆ ಯೋಗ್ಯವಾಗುವಂತೆ ಮರು ನಿರ್ಮಿಸಬೇಕಿದೆ. ನೌಕರರು ಭಯರಹಿತ ವಾತಾವರಣದಲ್ಲಿ ನೆಲೆಸುವಂತೆ ಮಾಡಬೇಕೆಂಬುದು ಇಲ್ಲಿನ ಸಿಬ್ಬಂದಿ ಒತ್ತಾಯವಾಗಿದೆ.

ವಿದ್ಯುತ್ ಉಪಕರಣಗಳ ಸಲಕರಣೆಗಳ ರಕ್ಷಣೆಗಾಗಿ ಕಾಂಪೌಂಡ್‌ನ ಅವಶ್ಯಕತೆ ಇರುವುದರಿಂದ ಕೆಪಿಟಿಸಿಎಲ್‌ನವರು ಶೀಘ್ರದಲ್ಲಿ ಕಾಂಪೌಂಡ್ ನಿರ್ಮಿಸಿಕೊಡಬೇಕು. ಜತೆಗೆ ಕಚೇರಿ ಮುಖ್ಯದ್ವಾರಕ್ಕೆ ಗೇಟ್ ಅಳವಡಿಸಬೇಕು.
| ಎಸ್.ಆರ್. ಶಿಂಧೆ ಸ್ಟೋರ್ ಕೀಪರ್, ಹೆಸ್ಕಾಂ ರಾಯಬಾಗ

ಕೆಪಿಟಿಸಿಎಲ್ ಕಚೇರಿ ಮತ್ತ ವಸತಿ ನಿಲಯಗಳಿಗೆ ಇರುವ ಕಾಂಪೌಂಡ್ ಕುಸಿದು ಬಿದ್ದಿದೆ. ಅಲ್ಲದೆ, ವಸತಿ ನಿಲಯಗಳು ಮಳೆಗಾಲದಲ್ಲಿ ಸೋರುತ್ತಿರುವುದರಿಂದ ಅವು ವಾಸಕ್ಕೆ ಯೋಗ್ಯವಾಗಿಲ್ಲ. ಕಾಂಪೌಂಡ್ ನಿರ್ಮಿಸಲು ಮತ್ತು ವಸತಿ ನಿಲಯ ದುರಸ್ತಿ ಮಾಡಿಕೊಡುವಂತೆ ಕೆಪಿಟಿಸಿಎಲ್‌ನ ಸಿವಿಲ್ ವರ್ಕ್ ವಿಭಾಗಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಂಬಂಧಿಸಿದ ವಿಭಾಗದವರು ಎಸ್ಟಿಮೇಟ್ ಮಾಡಿದ್ದು, ಶೀಘ್ರವಾಗಿ ಟೆಂಡರ್ ಕರೆದು ಕೆಲಸ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.
| ಸಂಜೀವಕುಮಾರ ಟೊನಪೆ ಜೆಇ, ಕೆಪಿಟಿಸಿಎಲ್ ರಾಯಬಾಗ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...