More

    ಕಾರ್ಮಿಕರಿಗೆ ಕೊಡಿ ಕನಿಷ್ಠ ವೇತನ; ಎಐಟಿಯುಸಿ ಯ ತಾಲೂಕು ಸಂಚಾಲಕ ಹಲಗಿ ಸುರೇಶ ಒತ್ತಾಯ

    ಹೂವಿನಹಡಗಲಿ : ರಾಜ್ಯದ ಅಸಂಘಟಿತ ವಲಯದಲ್ಲಿ ಬರುವ ಎಲ್ಲ ಕಾರ್ಮಿಕ ವರ್ಗದವರಿಗೆ ಸರ್ಕಾರ ಕನಿಷ್ಠ ವೇತನ ಪದ್ಧ್ದತಿಯನ್ನು ಜಾರಿಗೆ ತರಲಿ ಎಂದು ಎಐಟಿಯುಸಿ ಯ ತಾಲೂಕು ಸಂಚಾಲಕ ಹಲಗಿ ಸುರೇಶ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ. ಕಾರ್ಮಿಕರನ್ನು ಕಡಿಮೆ ವೇತನದಲ್ಲಿ ದುಡಿಸಿಕೊಳ್ಳಲಾಗುತ್ತಿದ್ದರೂ ಅವರಿಗೆ ಸೇವಾ ಭದ್ರತೆಯನ್ನು ಕಲ್ಪಿಸುತ್ತಿಲ್ಲ. ಇದು ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ದೊಡ್ಡ ಪಟ್ಟಣಗಳಲ್ಲಿನ ಕೈಗಾರಿಕೆಗಳಲ್ಲಿ ಬರುವ ಅಲ್ಪವೇತನದಲ್ಲಿ ಜೀವನ ನಡೆಸಲು ಕಷ್ಟವಾಗುತ್ತಿದೆ. ಕಾರ್ಮಿಕರಿಗೆ ವೇತನ ಹೆಚ್ಚಳ ಮತ್ತು ಸೇವಾ ಭದ್ರತೆಯನ್ನು ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಪೇ.8 ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ತಾಲೂಕಿನ ಅಸಂಘಟಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವರು ಎಂದರು.

    ಐಟಿಯುಸಿಯ ಜಿಲ್ಲಾ ಕಾರ್ಯದರ್ಶಿ ಶಾಂತರಾಜಜೈನ್ ಮಾತನಾಡಿ, ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಬಂದಂತಹ ಹಣವನ್ನು ಸರ್ಕಾರದ ಬೇರೆ ಬೇರೆ ಯೋಜನೆಗಳಿಗೆ ಬಳುಸುತ್ತದೆ. ಸಾರಿಗೆ ಇಲಾಖೆಯಲ್ಲಿ ರಾಜ್ಯದಲ್ಲಿ ನಾಲ್ಕು ವಿಭಾಗಗಳನ್ನು ಸೇರಿಸಿ ಒಂದೇ ವಿಭಾಗದಡಿ ಕಾರ್ಯ ನಿರ್ವಹಿಸುವಂತೆ ಮಾಡಬೇಕು ಎಂದರು.

    ಅಂಗನವಾಗಿ ಕಾರ್ಯಕರ್ತರ ಸಂಘದ ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮೀ ಮಾತನಾಡಿ, ರಾಜ್ಯದಲ್ಲಿ ಆರಂಭಿಸಿರುವ ಅವೈಜ್ಞಾನಿಕವಾದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಡಬೇಕು. ಕಾಯಂ ಮತ್ತು ಗುತ್ತಿಗೆ ನೌಕರರಿಗೆ ವೇತನ ಮಂಡಳಿಯಿಂದ ವೇತನ ನೀಡುವಂತೆ ಶಿಫಾರಸು ಮಾಡಬೇಕು ಎಂದರು.
    ಕಿಸಾನ್ ಸಭಾದ ತಾಲೂಕು ಅಧ್ಯಕ್ಷ ಮುಕುಂದಗೌಡ, ಕಾರ್ಮಿಕ ಸಂಘದ ತಾಲೂಕು ಅಧ್ಯಕ್ಷ ಬಾವಾಜಿ ಜಂಗ್ಲಿಸಾಬ್, ಪ್ರಮುಖರಾದ ಕವಿತಾ, ಕಮಲಾಕ್ಷಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts