ಏರ್​ಪೋರ್ಟ್​ ಭದ್ರೆತೆಯಿಂದ ರನ್ಯಾ ತಪ್ಪಿಸಿಕೊಂಡಿದ್ದಾದ್ರೂ ಹೇಗೆ? ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶಿಸಿದ ಗೃಹ ಇಲಾಖೆ

Ranya Ramachandra Rao
Published on

ಬೆಂಗಳೂರು: ಚಿನ್ನ ಕಳ್ಳಸಾಗಾಣೆಯ ಪ್ರಕರಣದಲ್ಲಿ ಮಾಣಿಕ್ಯ, ಪಟಾಕಿ ಖ್ಯಾತಿಯ ನಟಿ ರನ್ಯಾ ರಾವ್ (Ranya Rao) ಅವರನ್ನು ಮಾರ್ಚ್​ 03ರಂದು  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೂಡ ತನಿಖೆಯನ್ನು ಚುರುಕುಗೊಳಿಸಿದ್ದು, ಹವಾಲಾ ಕೈವಾಡದ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರ ತಂದೆ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ಎಂಡಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದ್ದು, ಸರ್ಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. 

Ranya Rao Smuggling

ಚಿನ್ನ ಕಳ್ಳಸಾಗಾಣೆಗೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ರಾಮಚಂದ್ರ ರಾವ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಶಿಷ್ಟಾಚಾರದ ಸೌಲಭ್ಯ ಪಡೆಯಲು ಕಾರಣವಾದ ಸಂಗತಿಗಳು ಯಾವುವು? ಕೇಸ್​​ನಲ್ಲಿ ರಾಮಚಂದ್ರರಾವ್ ಪಾತ್ರ ಏನೇನಿದೆ ಎಂಬ ಬಗ್ಗೆ ತನಿಖೆ ನಡೆಸಲು ಸರ್ಕಾರ ಆದೇಶಿಸಿದ್ದು, ಒಂದು ವಾರದ ಒಳಗಾಗಿ ವರದಿ ಸಲ್ಲಿಸಲು ಸೂಚಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಅಧಿಕಾರಿಗಳು ರನ್ಯಾ ಹಾಗೂ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯ ನಡುವಿನ ಮಾತುಕತೆಯ ಆಡಿಯೋವನ್ನು ಪತ್ತೆಹಚ್ಚಿದ್ದು, ಇದನ್ನು ಮುಂದಿಟ್ಟುಕೊಂಡು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರು ಬಂಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net