More

  Sikandar: ಸಲ್ಮಾನ್ ಖಾನ್ ಸಿನಿಮಾದಲ್ಲಿ ನಟಿಸಲು ಕೂರ್ಗ್ ಬೆಡಗಿ ರಶ್ಮಿಕಾ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತೇ?

  ಮುಂಬೈ: ಕನ್ನಡದ ನಟಿ ರಶ್ಮಿಕಾ ಮಂದಣ್ಣ ಕಳೆದ ಕೆಲವು ವರ್ಷಗಳಿಂದ ಟಾಲಿವುಡ್​ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ್ದಾರೆ. ರಶ್ಮಿಕಾ ಕ್ಯಾಮೆರಾ ಮುಂದೆ ತಮ್ಮ ಪ್ರತಿಭೆಯನ್ನು ತೋರಿಸುವ ಮೂಲಕ ನ್ಯಾಷನಲ್​ ಕ್ರಶ್ ಆಗಿ ಕ್ರೇಜ್ ಗಿಟ್ಟಿಸಿಕೊಂಡಿದ್ದಾರೆ.

  ಇದನ್ನೂ ಓದಿ: ಪೌರತ್ವ ತಿದ್ದುಪಡಿ ಕಾಯ್ದೆಯಡಿ 14 ಜನರಿಗೆ ಪ್ರಮಾಣಪತ್ರ ಹಸ್ತಾಂತರಿಸಿದ ಕೇಂದ್ರ

  ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಸ್ಟಾರ್ ಸ್ಥಾನಮಾನ ಪಡೆದಿರುವ ರಶ್ಮಿಕಾ ಸದ್ಯ ಸಕ್ಸಸ್ ಖುಷಿಯಲ್ಲಿ ತೇಲಾಡುತ್ತಿದ್ದಾರೆ. ಟಾಲಿವುಡ್ ನಲ್ಲಿ ಹಲವು ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿದ ಚೆಲುವೆ ಇದೀಗ ಬಾಲಿವುಡ್ ನಲ್ಲೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ನಟ ಸಲ್ಮಾನ್ ಖಾನ್ ಜೊತೆ ನಟಿಸುವ ಅದ್ಭುತ ಅವಕಾಶ ಪಡೆದುಕೊಂಡಿದ್ದಾರೆ.

  Sikandar: ಸಲ್ಮಾನ್ ಖಾನ್ ಸಿನಿಮಾದಲ್ಲಿ ನಟಿಸಲು ಕೂರ್ಗ್ ಬೆಡಗಿ ರಶ್ಮಿಕಾ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತೇ?

  ಎ.ಆರ್ ಮುರುಗದಾಸ್ ನಿರ್ದೇಶನದ, ಸಿಕಂದರ್ ಸಿನಿಮಾ ಈಗಾಗಲೇ ಚಿತ್ರೀಕರಣವನ್ನು ಪ್ರಾರಂಭಿಸಿದೆ. ಈದ್ 2025 ರಂದು ತೆರೆಗೆ ಬರಲು ಸಿದ್ಧವಾಗಿದೆ.

  ‘ಸಿಖಂದರ್’ ಸಿನಿಮಾ ಘೋಷಣೆಯ ನಂತರ ಸಲ್ಮಾನ್ ಖಾನ್‌ಗೆ 58 ವರ್ಷ, ರಶ್ಮಿಕಾಗೆ 28 ವರ್ಷ ಎಂದು ವಯಸ್ಸಿನ ಅಂತರದ ಬಗ್ಗೆ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಈಗ ರಶ್ಮಿಕಾ ಮಂದಣ್ಣ ಸಂಭಾವನೆ ಕುರಿತು ಭಾರೀ ಚರ್ಚೆ ಶುರುವಾಗಿದೆ. ಅಂದಹಾಗೆ ಈ ಸಿನಿಮಾದಲ್ಲಿ ನಟಿಸಲು ರಶ್ಮಿಕಾ ಬರೋಬ್ಬರಿ 4 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

  ಬಿಗ್ ಬಜೆಟ್ ಸಿನಿಮಾ ಮಾತ್ರವಲ್ಲದೆ, ಸಲ್ಮಾನ್ ಖಾನ್ ಜೊತೆ ನಟಿಸುತ್ತಿರುವ ರಶ್ಮಿಕಾ ಅದೃಷ್ಟ ಖುಲಾಯಿಸಿದೆ ಎಂದೇ ಹೇಳಬಹುದು. ಸಿಕಂದರ್ ಜೊತೆಗೆ, ರಶ್ಮಿಕಾ ಮಂದಣ್ಣ ಹಲವಾರು ಪ್ರಾಜೆಕ್ಟ್’ಗಳಿಗೆ ಸಹಿ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

  ನಟ ಅಲ್ಲು ಅರ್ಜುನ್, ರಶ್ಮಿಕಾ ಅಭಿನಯದ ಟಾಲಿವುಡ್​ನ ಪುಷ್ಪ 2 ಸಿನಿಮಾ ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ. ಇತ್ತೀಚೆಗೆ ಹಿಂದಿಯಲ್ಲಿ ಪ್ಯಾನ್ ಇಂಡಿಯಾ ಫಿಲ್ಮ್ ಅನಿಮಲ್ ನಲ್ಲಿ ರಶ್ಮಿಕಾ ನಟಿಸಿದ್ದರು. ಈ ಸಿನಿಮಾ ಮೂಲಕ ಮತ್ತೊಂದು ಬಿಗ್ ಹಿಟ್ ಅನ್ನು ಬುಟ್ಟಿಗೆ ಹಾಕಿಕೊಂಡಿದ್ದಾರೆ.

  ಬಿಜೆಪಿಗೆ 400 ಸ್ಥಾನ ಸ್ಥಾನ ಬಂದ್ರೆ ಮಥುರಾ, ಕಾಶಿಯಲ್ಲಿ ಭವ್ಯ ಮಂದಿರ ನಿರ್ಮಾಣ: ಹಿಮಂತ್‌ ಬಿಸ್ವಾ ಶರ್ಮಾ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts