More

    ವಿದ್ಯುತ್ ತಿದ್ದುಪಡಿ ಮಸೂದೆ ವಿರೋಧಿಸಿ 10ಕ್ಕೆ ಪ್ರತಿಭಟನೆ

    ಶಿವಮೊಗ್ಗ: ಕೇಂದ್ರ ಸರ್ಕಾರದ ನೂತನ ವಿದ್ಯುತ್ ತಿದ್ದುಪಡಿ ಮಸೂದೆ ವಿರೋಧಿಸಿ ಆ.10ರಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.
    ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಶನ್ ಒಕ್ಕೂಟಗಳ ಜತೆ ನೂರಾರು ರೈತರು, ಕೈಗಾರಿಕೋದ್ಯಮಿಗಳು ಹಾಗೂ ವ್ಯಾಪಾರಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಿವೆ. ಈ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರವ್ಯಾಪಿ ಚಳುವಳಿ ನಡೆಯುತ್ತಿದೆ. ದೆಹಲಿ ಹೊರವಲಯದ ಮೂರು ಹೆದ್ದಾರಿಗಳಲ್ಲಿ ಕಳೆದ ಎಂಟು ತಿಂಗಳಿಂದ ಆಹೋರಾತ್ರಿ ಧರಣಿ ನಡೆಸುತ್ತಿದ್ದರೂ ಕಾಯ್ದೆಗಳನ್ನು ಹಿಂಪಡೆಯದೆ ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸುಪ್ರೀಂಕೋರ್ಟ್ 18 ತಿಂಗಳು ಈ ಕಾಯ್ದೆಗಳನ್ನು ಜಾರಿ ಮಾಡದಂತೆ ಆದೇಶಿಸಿದೆ. ಈ ನಡುವೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ವಿದ್ಯುತ್ ಮಸೂದೆ ಮಂಡಿಸುತ್ತಿದೆ. ಈ ಮಸೂದೆ ತಿದ್ದುಪಡಿಯಲ್ಲಿ ವಿದ್ಯುತ್ ಪೂರೈಕೆ ಉಪಗುತ್ತಿಗೆ ಹಾಗೂ ಫ್ರಾಂಚೈಸಿಗೆ ಅವಕಾಶವಿದೆ. ಈ ಮೂಲಕ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡುವುದೇ ತಿದ್ದುಪಡಿಯ ಉದ್ದೇಶ ಎಂದು ದೂರಿದರು.
    ಸಂಘದ ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಇ.ಬಿ.ಜಗದೀಶ್, ಡಿಎಸ್‌ಎಸ್ ಮುಖಂಡ ಟಿ.ಎಚ್.ಹಾಲೇಶಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts