ಮುಂಬೈ: ದೇಶದ ಪ್ರಮುಖ ನಗರಗಳಲ್ಲಿ ಟ್ರಾಫಿಕ್ ಒಂದು ಪ್ರಮುಖ ಸಮಸ್ಯೆಯಾಗಿದೆ. ಟ್ರಾಫಿಕ್ ತಪ್ಪಿಸಿಕೊಳ್ಳಲು ಹಲವರು ಮೆಟ್ರೋದಲ್ಲಿ ಪ್ರಯಾಣಿಸುತ್ತಾರೆ. ಅನೇಕ ಸೆಲೆಬ್ರಿಟಿಗಳು ಈಗಾಗಲೇ ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ ಸುದ್ದಿಯಾಗಿದ್ದಾರೆ. ಇತ್ತೀಚೆಗಷ್ಟೇ ಬಾಲಿವುಡ್ನ ಸ್ಟಾರ್ ನಟ ಹೃತಿಕ್ ರೋಷನ್ ತಮ್ಮ ಕಾರು ಬಿಟ್ಟು ಮುಂಬೈನ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
ಬಾಲಿವುಡ್ನಲ್ಲಿ ಹೃತಿಕ್ ರೋಷನ್ ಕ್ರೇಜ್ ಎಂದರೆ ಬೇರೆ ಹೇಳಬೇಕಾಗಿಲ್ಲ. ಹೃತಿಕ್ ‘ಫೈಟರ್’ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣಕ್ಕೆ ತೆರಳುವ ವೇಳೆ ಟ್ರಾಫಿಕ್ ಜಾಸ್ತಿಯಾಗಿ ಮೆಟ್ರೋ ಹತ್ತಿದ್ದಾರೆ. ಅಕ್ಟೋಬರ್ 13ರ ಶುಕ್ರವಾರದಂದು ಮುಂಬೈ ಮೆಟ್ರೋದಲ್ಲಿ ಪ್ರಯಾಣಿಸಿದ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಮೆಟ್ರೋ ಪ್ರಯಾಣದ ಅನುಭವವನ್ನು ಹೃತಿಕ್ ಹಂಚಿಕೊಂಡಿದ್ದಾರೆ. ಹೃತಿಕ್ ಅವರನ್ನು ನೋಡಿದ ಅಭಿಮಾನಿಗಳು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
ಹೃತಿಕ್ ರೋಷನ್ ನೋಡಲು ಅಭಿಮಾನಿಗಳು ಮುಗಿಬಿದ್ದರು. ಮೆಟ್ರೋದಲ್ಲಿ ಕಡಿಮೆ ಪ್ರಯಾಣಿಕರಿದ್ದ ಕಾರಣ ಹೃತಿಕ್ ತಾಳ್ಮೆಯಿಂದ ತಮ್ಮ ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಂಡರು. ಆ ಫೋಟೋಗಳನ್ನು ಹೃತಿಕ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಹೃತಿಕ್ ಸಿದ್ಧಾರ್ಥ್ ಆನಂದ್ ಅವರ ಆಕ್ಷನ್ ಚಿತ್ರ ‘ಫೈಟರ್’ ಅನ್ನು ಚಿತ್ರೀಕರಿಸುತ್ತಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ಅನಿಲ್ ಕಪೂರ್ ಜೊತೆ ಸ್ಕ್ರೀನ್ ಸ್ಪೇಸ್ ಹಂಚಿಕೊಳ್ಳಲಿದ್ದಾರೆ. ಚಲನಚಿತ್ರವು ಜನವರಿ 25, 2024 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.
ತನ್ನನ್ನು ತಾನೇ ಮದುವೆಯಾದ ಮಹಿಳೆ; 40 ವರ್ಷ ಕಾದ್ರೂ ಮಿಸ್ಟರ್ ರೈಟ್ ಪರ್ಸನ್ ಸಿಗಲೇ ಇಲ್ಲ…!