

ಮುಂಬೈ: ಬಾಲಿವುಡ್ ಸ್ಟಾರ್ ಹೀರೋ ಹೃತಿಕ್ ರೋಷನ್ ಎರಡನೇ ಮದುವೆಗೆ ರೆಡಿಯಾಗಲಿದ್ದಾರೆ ಮೊದಲ ಪತ್ನಿಗೆ ವಿಚ್ಛೇದನ ನೀಡಿರುವ ಈ ಹೀರೋ ಸದ್ಯದಲ್ಲೇ ಯುವ ನಾಯಕಿಯ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರಾ? ಎನ್ನುವ ಪ್ರಶ್ನೆಗೆ ಹೌದು ಎಂಬ ಉತ್ತರ ಬಾಲಿವುಡ್ ಮಾಧ್ಯಮ ವಲಯದಲ್ಲಿ ಕೇಳಿಬರುತ್ತಿದೆ.
ಹೃತಿಕ್ ಎರಡನೇ ಮದುವೆಗೆ ತಯಾರಿ ನಡೆಸುತ್ತಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ಹೃತಿಕ್ 2000 ರಲ್ಲಿ ಇಂಟೀರಿಯರ್ ಡಿಸೈನರ್ ಸುಸೇನ್ ಖಾನ್ ಅವರನ್ನು ವಿವಾಹವಾದರು. ಅವರ ಸಂಬಂಧವು 2014 ರಲ್ಲಿ ಕೊನೆಗೊಂಡಿತು.