More

    ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಮೂರು ತಿಂಗಳು ಗಡುವು: ಸಚಿವ ರಾಮಲಿಂಗಾರೆಡ್ಡಿ

    ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂದು ನೀಡಿದ್ದ ಗಡುವನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತು ಶೀಘ್ರ ಆದೇಶ ಹೊರಡಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ:ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ: ರಾಹುಲ್-ಪ್ರಿಯಾಂಕಾ ಸಾಥ್

    ಬುಧವಾರ (ಫೆ.14) ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕುರಿತಂತೆ ಶಾಸಕ ಮಧು ಮಾದೇಗೌಡ ಅವರು ಸರ್ಕಾರಕ್ಕೆ ಪ್ರಶ್ನೆಗಳನ್ನು ಮುಂದಿಟ್ಟಿದ್ದರು. 18 ಲಕ್ಷ ವಾಹನಗಳಷ್ಟೇ ಈಗ ನೋಂದಣಿ ಆಗಿವೆ. ಆದ್ದರಿಂದ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ಸರ್ಕಾರಕ್ಕೆ ಮಧು ಮಾದೇಗೌಡ ಅವರು ಮನವಿ ಸಲ್ಲಿಸಿದ್ದರು.

    ಮಧು ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ರಾಜ್ಯದಲ್ಲಿ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ಆದಷ್ಟು ಬೇಗ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ವಿವರಿಸಿದರು.

    2019ರ ಏಪ್ರಿಲ್‌ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು (ಎಚ್‌ಎಸ್‌ಆರ್‌ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂದು ಆಗಸ್ಟ್‌ 17ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದೇ ರೀತಿ ಆ.18ರಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕಾಗಿದೆ.

    ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?: ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

    ಮನೆ ಮೇಲ್ಛಾವಣಿ ಉಚಿತ ವಿದ್ಯುತ್​ ಪ್ರಯೋಜನಾ ಪಡೆಯಲು pmsuryaghar.gov.in ಅರ್ಜಿ ಸಲ್ಲಿಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts