ಸಿನಿಮಾ

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದ್ದು ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಇದ್ದು ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಎರಡು ದಿನ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಭಾರಿ ಮಳೆ: ಹಳ್ಳ ದಾಟುತ್ತಿದ್ದ ತಾಯಿ ಜತೆ ಇಬ್ಬರು ಮಕ್ಕಳೂ ನೀರುಪಾಲು

ಗುಡುಗು ಸಹಿತ ಮಳೆ

ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಯಲ್ಲಿ ಎರಡು ದಿ‌ನ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಬೆಂಗಳೂರು ನಗರದಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ. ಇನ್ನು ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರಧಾನಿ ರೋಡ್ ಶೋ | ಮೋದಿ ಮೇಲೆ ಹೂ ಮಳೆ ಸುರಿಸಿದ ಅಭಿಮಾನಿಗಳು

Latest Posts

ಲೈಫ್‌ಸ್ಟೈಲ್