More

  ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು

  ಹುಣಸಗಿ: ಕ್ಷುಲ್ಲಕ ಕಾರಣಕ್ಕೆ ಅಕ್ಕಪಕ್ಕದ ಮನೆಯವರ ಜಗಳದಿಂದ ಮನನೊಂದು ಮಹಿಳೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆ ಕಚಕನೂರ ಗ್ರಾಮದಲ್ಲಿ ನಡೆದಿದೆ.

  ಮನೆ ಮುಂದೆ ನೀರು ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕಪಕ್ಕದ ಮನೆಯವರ ಜತೆ ಜಗಳವಾಡಿ ಅ.೨೧ರಂದು ವಿಜಯಲಕ್ಷ್ಮೀ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು, ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾಳೆ ಎಂದು ಪತಿ ಸಾಹೇಬಗೌಡ ಸಾಸನೂರ ನೀಡಿದ ದೂರಿನನ್ವಯ ಹುಣಸಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಭಾನುವಾರ ಮೃತಳ ಕುಟುಂಬಸ್ಥರು ಪಟ್ಟಣದ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು.

  ಸ್ಥಳಕ್ಕೆ ಡಿವೈಎಸ್‌ಪಿ ಜಾವೀದ್ ಇನಾಮದಾರ ಭೇಟಿ ನೀಡಿ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಹಿಂಪಡೆದು ಅಂತ್ಯಕ್ರಿಯೆ ನೆರವೇರಿಸಿದರು. ಪಿಎಸ್‌ಐ ಚಂದ್ರಶೇಖರ ನಾರಾಯಣಪುರ ಹಾಗೂ ಸಿಬ್ಬಂದಿ ಇದ್ದರು.

  ರಾಜ್ಯೋತ್ಸವ ರಸಪ್ರಶ್ನೆ - 24

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts