More

    ಸುರಪುರ-ಹುಣಸಗಿ ಬರಪೀಡಿತ ಘೋಷಿಸಿ

    ಹುಣಸಗಿ: ನಿರಂತರ ವಿದ್ಯುತ್ ಪೂರೈಕೆ ಸೇರಿ ರೈತರ ವಿವಿಧ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ವಾಸುದೇವ ಮೇಟಿ ಬಣ)ಯಿಂದ ಪಟ್ಟಣದ ಬಸವೇಶ್ವರ ವೃತ್ತದಿಂದ ತಹಸಿಲ್ ಕಚೇರಿವರೆಗೆ ಪ್ರತಿಭಟನೆ ನಡೆಸಲಾಯಿತು.

    ತಹಸಿಲ್ ಕಚೇರಿ ಬಳಿ ಸೇನೆ ಕಾರ್ಯಕರ್ತರು ರೈತರ ಸಮಸ್ಯೆಗಳನ್ನು ಈಡೇರಿಸುವ ಕೆಲಸ ಮಾಡಬೇಕೆಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
    ಸಂಘದ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಮಾತನಾಡಿ, ಈಗಾಗಲೇ ಕೃಷ್ಣಾ ಅಚ್ಚಕಟ್ಟು ಪ್ರದೇಶದಲ್ಲಿ ವಾರಾಬಂದಿ ನೀರು ಹರಿಸುವುದು ಕೈ ಬಿಡಬೇಕು. ಸುರಪುರ-ಹುಣಸಗಿ ತಾಲೂಕುಗಳನ್ನು ಸಂಪೂರ್ಣ ಬರಗಾಲವೆಂದು ಘೋಷಿಸಿ ಪರಿಹಾರ ವಿತರಿಸಬೇಕು. ಏಳು ಗಂಟೆ ವಿದ್ಯುತ್ ಪೂರೈಕೆ ಮಾಡದೆ ನಿರಂತರ ವಿತರಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸುತ್ತಿದ್ದು, ಜೆಸ್ಕಾಂ ಇಲಾಖೆ ಅಧಿಕಾರಿಗಳು ನಿಷ್ಕಾಳಜಿ ವಹಿಸುತ್ತಿದ್ದಾರೆ. ವಿಮಾ ಕಂಪನಿಯವರು ಬೆಳೆ ವಿಮೆ ಪಾವತಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ರೈತರಿಗೆ ವಿಮೆ ಹಣ ಸಂದಾಯಿಸಬೇಕು ಎಂದು ಆಗ್ರಹಿಸಿದರು.

    ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಕಂದಾಯ ನಿರೀಕ್ಷಕ ಕಲ್ಲಪ್ಪ ಅವರಿಗೆ ಸಲ್ಲಿಸಲಾಯಿತು. ಪಿಎಸ್‌ಐ ಚಂದ್ರಶೇಖರ ಬಂದೋಬಸ್ತ್ ಕಲ್ಪಿಸಿದ್ದರು.

    ಸದಸ್ಯರಾದ ಸಂಗಣ್ಣ ಮುದ್ದೇಬಿಹಾಳ, ನೂರ್ ಅಹ್ಮದ್, ಗುರುನಾಥರೆಡ್ಡಿ ಹದನೂರ, ವೆಂಕೋಬ ಕಟ್ಟಿಮನಿ, ಮುತ್ತುಗೌಡ ಪಾಟೀಲ್, ಮಲ್ಲನಗೌಡ ಬಿರಾದಾರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts